ವಿಪಕ್ಷಗಳ ಒಗ್ಗೂಡಿವಿಕೆ ತಂತ್ರ: ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸುವಂತೆ ಸ್ಟಾಲಿನ್ ಗೆ ಖರ್ಗೆ ಆಹ್ವಾನ
2024ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ವಿಪಕ್ಷಗಳ ಒಗ್ಗೂಡಿವಿಕೆಯ ಮಂತ್ರ ಪಠಿಸುತ್ತಿದ್ದು, ಇದಕ್ಕೆ ಇಂಬು ನೀಡುವಂತೆ ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಗೆ ಆಹ್ವಾನ ನೀಡಿದ್ದಾರೆ.

ನವದೆಹಲಿ: 2024ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ವಿಪಕ್ಷಗಳ ಒಗ್ಗೂಡಿವಿಕೆಯ ಮಂತ್ರ ಪಠಿಸುತ್ತಿದ್ದು, ಇದಕ್ಕೆ ಇಂಬು ನೀಡುವಂತೆ ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಗೆ ಆಹ್ವಾನ ನೀಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರು ವಿರೋಧ ಪಕ್ಷಗಳ ಸಭೆಗೆ ಹಾಜರಾಗುವಂತೆ ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಅವರಿಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರದ ಬಿಜೆಪಿ ನೇತೃತ್ವದ ಸರಕಾರದ ವಿರುದ್ಧ ಸಾಮಾನ್ಯ ಕಾರ್ಯತಂತ್ರವನ್ನು ರೂಪಿಸಲು ಹಾಗೂ ಒಗ್ಗಟ್ಟಿನ ಒಕ್ಕೂಟ ಪ್ರಸ್ತುತಪಡಿಸಲು ಸಮಾನ ಮನಸ್ಕ ಪಕ್ಷದ ನಾಯಕರ ಸಭೆಯನ್ನು ಕಾಂಗ್ರೆಸ್ ಪ್ರಸ್ತಾಪಿಸಿದೆ. ಮೂಲಗಳ ಪ್ರಕಾರ ಖರ್ಗೆ ಅವರು ಸ್ಟಾಲಿನ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಹಾಗೂ ವಿರೋಧ ಪಕ್ಷದ ಸಭೆಗೆ ಸೇರಲು ಅವರನ್ನು ಆಹ್ವಾನಿಸಿದ್ದಾರೆ.
ಪ್ರಸ್ತಾವಿತ ಸಭೆಯಲ್ಲಿ ತಮ್ಮ ಬೆಂಬಲ ಹಾಗೂ ಭಾಗವಹಿಸುವಿಕೆಯ ಬಗ್ಗೆ ಸ್ಟಾಲಿನ್ ಅವರು ಖರ್ಗೆ ಅವರಿಗೆ ಭರವಸೆ ನೀಡಿದರು ಎಂದು ತಿಳಿದುಬಂದಿದೆ. ತಮಿಳುನಾಡಿನಲ್ಲಿ ಡಿಎಂಕೆ ಕಾಂಗ್ರೆಸ್‌ನ ಪ್ರಮುಖ ಮಿತ್ರ ಪಕ್ಷವಾಗಿದೆ.
2014 ರಲ್ಲಿ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ನಂತರ, ಅವರು ಭಾರತೀಯ ರಾಜಕೀಯದಲ್ಲಿ ಪ್ರಾಬಲ್ಯ ಸಾಧಿಸಿದ್ದಾರೆ ಮತ್ತು ಸತತ ಎರಡು ಸಾರ್ವತ್ರಿಕ ಚುನಾವಣೆಗಳಲ್ಲಿ ವಿರೋಧ ಪಕ್ಷಗಳನ್ನು ಸೋಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


