ಅರವಿಂದ ಕೇಜ್ರಿವಾಲ್‌ಗೆ ಸಿಬಿಐ ಸಮನ್ಸ್ ವಿರೋಧಿಸಿ ಎಎಪಿ ಮುಖಂಡರು, ಕಾರ್ಯಕರ್ತರಿಂದ ದೆಹಲಿಯಾದ್ಯಂತ ಪ್ರತಿಭಟನೆ
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಕರೆಸಿಕೊಂಡ ಸಿಬಿಐ ವಿರುದ್ಧ ಆಮ್ ಆದ್ಮಿ ಪಕ್ಷ ಭಾನುವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ.

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಕರೆಸಿಕೊಂಡ ಸಿಬಿಐ ವಿರುದ್ಧ ಆಮ್ ಆದ್ಮಿ ಪಕ್ಷ ಭಾನುವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ.
ಕೇಜ್ರಿವಾಲ್ ಅವರ ವಿಚಾರಣೆ ನಡೆಯುತ್ತಿದ್ದಂತೆ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ದೆಹಲಿ ಸಚಿವರಾದ ಸೌರಭ್ ಭಾರದ್ವಾಜ್, ಅತಿಶಿ ಮತ್ತು ಕೈಲಾಶ್ ಗೆಹ್ಲೋಟ್ ಮತ್ತು ರಾಜ್ಯಸಭಾ ಸಂಸದರಾದ ಸಂದೀಪ್ ಪಾಠಕ್, ರಾಘವ್ ಚಡ್ಡಾ ಮತ್ತು ಸಂಜಯ್ ಸಿಂಗ್ ಸೇರಿದಂತೆ ಪಕ್ಷದ ಉನ್ನತ ನಾಯಕರು ತನಿಖಾ ಸಂಸ್ಥೆಯ ಕೇಂದ್ರ ಕಚೇರಿ ಬಳಿ ಜಮಾಯಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು.
ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಎಪಿ ದೆಹಲಿ ಸಂಚಾಲಕ ಗೋಪಾಲ್ ರೈ, ಸುಮಾರು 1,500 ಜನರನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ಮುಖ್ಯಮಂತ್ರಿಗೆ ಸಿಬಿಐ ಸಮನ್ಸ್ ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕಾಗಿ ರಾಷ್ಟ್ರ ರಾಜಧಾನಿಯಾದ್ಯಂತ ಹಲವಾರು ಶಾಸಕರು ಮತ್ತು ಕೌನ್ಸಿಲರ್‌ಗಳನ್ನು 'ಬಂಧಿಸಲಾಗಿದೆ' ಎಂದು ಹೇಳಿದರು.
रुके न जो, झुके न जो, दबे न जो, मिटे न जो
हम वो इन्क़लाब हैं, ज़ुल्म का जवाब हैं
हर शहीद, हर ग़रीब का हम ही तो ख़्वाब हैं
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


