ರಾಜಕೀಯ ಮಾಡಬೇಡಿ: ಸುಡಾನ್‌ನಲ್ಲಿ ಸಿಲುಕಿದ ಕನ್ನಡಿಗರ ಸುರಕ್ಷತೆ ಬಗ್ಗೆ ಆತಂಕ ವ್ಯಕ್ತಪಡಿಸಿದ ಸಿದ್ದರಾಮಯ್ಯಗೆ ಜೈಶಂಕರ್ ತಿರುಗೇಟು
ಸಂಘರ್ಷ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಕನ್ನಡಿಗರ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಅವರು, ಈ ವಿಚಾರದಲ್ಲಿ ರಾಜಕೀಯ...

ನವದೆಹಲಿ: ಸಂಘರ್ಷ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಕನ್ನಡಿಗರ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಅವರು, ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ತಿರುಗೇಟು ನೀಡಿದ್ದಾರೆ.
"ಸುಡಾನ್‌ನಲ್ಲಿ ಕಳೆದ ಕೆಲವು ದಿನಗಳಿಂದ ಕರ್ನಾಟಕ ಹಕ್ಕಿ ಪಿಕ್ಕಿ ಬುಡಕಟ್ಟು ಸಮುದಾಯದ 31 ಮಂದಿ ಆಹಾರವಿಲ್ಲದೆ ಪರದಾಡುತ್ತಿದ್ದಾರೆ ಎಂದು ವರದಿಯಾಗಿದೆ. ಆದರೆ ಕೇಂದ್ರ ಸರ್ಕಾರ ಅವರನ್ನು ಮರಳಿ ಕರೆತರಲು ಇನ್ನೂ ಕ್ರಮ ಕೈಗೊಂಡಿಲ್ಲ. ಬಿಜೆಪಿ ಸರ್ಕಾರ ರಾಜತಾಂತ್ರಿಕ ಮಾತುಕತೆ ನಡೆಸಬೇಕು ಮತ್ತು ಅವರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಬೇಕು" ಎಂದು ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಜೈಶಂಕರ್, "ನಿಮ್ಮ (ಸಿದ್ದರಾಮಯ್ಯ) ಟ್ವೀಟ್ ನೋಡಿ ದಿಗಿಲುಗೊಂಡೆ. ಅಲ್ಲಿ ಜೀವಗಳು ಅಪಾಯದಲ್ಲಿದೆ. ರಾಜಕೀಯ ಮಾಡಬೇಡಿ ಎಂದು ತಿರುಗೇಟು ನೀಡಿದ್ದಾರೆ.
ಏಪ್ರಿಲ್ 14 ರಂದು ಸಂಘರ್ಷ ಪ್ರಾರಂಭವಾದಾಗಿನಿಂದ, ಖಾರ್ಟೂಮ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯು ಸುಡಾನ್‌ನಲ್ಲಿರುವ ಹೆಚ್ಚಿನ ಭಾರತೀಯ ಪ್ರಜೆಗಳು ಮತ್ತು ಪಿಐಒಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ ಎಂದು ಜೈಶಂಕರ್ ತಿಳಿಸಿದ್ದಾರೆ.
ಭದ್ರತಾ ಕಾರಣಗಳಿಗಾಗಿ ಸುಡಾನ್‌ನಲ್ಲಿರುವ ಭಾರತೀಯರ ವಿವರಗಳನ್ನು ಸಾರ್ವಜನಿಕಗೊಳಿಸಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


