ಮೊರ್ಬಿ ಸೇತುವೆ ದುರಂತ: ಒರೆವಾ ಕಂಪನಿಯಿಂದ ಸಂತ್ರಸ್ತರಿಗೆ 14.62 ಕೋಟಿ ರೂ. ಮಧ್ಯಂತರ ಪರಿಹಾರ
ಕಳೆದ ಫೆಬ್ರವರಿಯಲ್ಲಿ ಗುಜರಾತ್ ಹೈಕೋರ್ಟ್ ನಿರ್ದೇಶನದಂತೆ ಒರೆವಾ ಗ್ರೂಪ್ ಮೊರ್ಬಿ ಸೇತುವೆ ದುರಂತದ ಸಂತ್ರಸ್ತರಿಗೆ ಮಧ್ಯಂತರ ಪರಿಹಾರ ನೀಡಲು 14.62 ಕೋಟಿ ರೂಪಾಯಿಯನ್ನು ರಾಜ್ಯ ಕಾನೂನು ಸೇವಾ ಪ್ರಾಧಿಕಾರದಲ್ಲಿ ಠೇವಣಿ...

ಅಹಮದಾಬಾದ್: ಕಳೆದ ಫೆಬ್ರವರಿಯಲ್ಲಿ ಗುಜರಾತ್ ಹೈಕೋರ್ಟ್ ನಿರ್ದೇಶನದಂತೆ ಒರೆವಾ ಗ್ರೂಪ್ ಮೊರ್ಬಿ ಸೇತುವೆ ದುರಂತದ ಸಂತ್ರಸ್ತರಿಗೆ ಮಧ್ಯಂತರ ಪರಿಹಾರ ನೀಡಲು 14.62 ಕೋಟಿ ರೂಪಾಯಿಯನ್ನು ರಾಜ್ಯ ಕಾನೂನು ಸೇವಾ ಪ್ರಾಧಿಕಾರದಲ್ಲಿ ಠೇವಣಿ ಇರಿಸಿದೆ ಎಂದು ಕಂಪನಿ ಮಂಗಳವಾರ ಹೈಕೋರ್ಟ್‌ಗೆ ತಿಳಿಸಿದೆ.
ಕಳೆದ ವರ್ಷ ಅಕ್ಟೋಬರ್ 30 ರಂದು ಮೊರ್ಬಿ ಪಟ್ಟಣದಲ್ಲಿ ತೂಗು ಸೇತುವೆ ಕುಸಿದು ಬಿದ್ದು 135 ಜನ ಸಾವನ್ನಪ್ಪಿದ್ದರು.
ಒರೆವಾ ಗ್ರೂಪ್ ಬ್ರಿಟಿಷರ ಕಾಲದ ಈ ತೂಗು ಸೇತುವೆಯ ಕಾರ್ಯಾಚರಣೆ ಮತ್ತು ನಿರ್ವಹಣೆಯ ಜವಾಬ್ದಾರಿ ವಹಿಸಿಕೊಂಡಿತ್ತು.
ಸಂತ್ರಸ್ತರಿಗೆ ಮಧ್ಯಂತರ ಪರಿಹಾರವಾಗಿ ನೀಡಬೇಕಾದ ಸಂಪೂರ್ಣ 14.62 ಕೋಟಿ ರೂ.ಗಳನ್ನು ಗುಜರಾತ್ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಠೇವಣಿ ಮಾಡಲಾಗಿದೆ ಎಂದು ಒರೆವಾ ಕಂಪನಿಯು, ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಜೆ ದೇಸಾಯಿ ಮತ್ತು ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರ ವಿಭಾಗೀಯ ಪೀಠಕ್ಕೆ ತಿಳಿಸಿದೆ.
ವಿಭಾಗೀಯ ಪೀಠ, ಫೆಬ್ರವರಿ 22 ರಂದು ನೀಡಿದ ಆದೇಶದಂತೆ ಪರಿಹಾರದ ಮೊತ್ತವನ್ನು ವಿತರಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.
ಈ ಆದೇಶದಲ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಸಂಬಂಧಪಟ್ಟ ಸರ್ಕಾರಿ ಅಧಿಕಾರಿಗಳ ನೆರವಿನೊಂದಿಗೆ ಸಂತ್ರಸ್ತರಿಗೆ ಪರಿಹಾರ ಹಂಚಿಕೆಯಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಗುಜರಾತ್ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ನ್ಯಾಯಾಲಯ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


