ಬಿಜೆಪಿ ಭ್ರಷ್ಟಾಚಾರವನ್ನು ಅನುಮೋದಿಸುತ್ತಿದೆ: ಈಶ್ವರಪ್ಪಗೆ ಪ್ರಧಾನಿ ದೂರವಾಣಿ ಕರೆ ಬಗ್ಗೆ ಕಾಂಗ್ರೆಸ್ ಟೀಕೆ
ಶಿವಮೊಗ್ಗದ ಬಿಜೆಪಿ ನಾಯಕ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿದ್ದರ ಬಗ್ಗೆ ಕಾಂಗ್ರೆಸ್ ಕುಹಕವಾಡಿದೆ.

ಬೆಂಗಳೂರು: ಶಿವಮೊಗ್ಗದ ಬಿಜೆಪಿ ನಾಯಕ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿದ್ದರ ಬಗ್ಗೆ ಕಾಂಗ್ರೆಸ್ ಕುಹಕವಾಡಿದೆ.
ಈಶ್ವರಪ್ಪ ಅವರಿಗೆ ಪ್ರಧಾನಿ ಮೋದಿ ಕರೆ ಮಾಡಿದ್ದನ್ನು ಕಾಂಗ್ರೆಸ್ ಭ್ರಷ್ಟಾಚಾರದ ಅನುಮೋದನೆ ಎಂದು ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ. ಈಶ್ವರಪ್ಪ ಅವರಿಗೆ ಹಾಗೂ ಅವರ ಕುಟುಂಬಕ್ಕೆ ಟಿಕೆಟ್ ನಿರಾಕರಣೆ ಮಾಡಿದ ಬಳಿಕವೂ ಪ್ರತಿಭಟಿಸದೇ ಇರುವುದಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿರುವುದು ಒಪ್ಪಲಾಗುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.
ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾಗಿದ್ದ ಕೆಎಸ್ ಈಶ್ವರಪ್ಪ 2022 ರ ಏಪ್ರಿಲ್ ನಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರ, ಬೆಳಗಾವಿಯ ಸಾರ್ವಜನಿಕ ಕಾಮಗಾರಿಗಳಲ್ಲಿ ಈಶ್ವರಪ್ಪ ಶೇ.40 ರಷ್ಟು ಕಮಿಷನ್ ಕೇಳುತ್ತಿದ್ದಾರೆ ಎಂಬ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದ. ಈ ಪ್ರಕರಣದ ತನಿಖೆಯಲ್ಲಿ ಕೆಎಸ್ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲಾಗಿತ್ತು.
ಈ ಬಳಿಕ ಈಶ್ವರಪ್ಪ ಸ್ವ ಇಚ್ಛೆಯಿಂದ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸುತ್ತಿರುವುದಾಗಿ ಘೋಷಿಸಿದ್ದರು ಆದರೆ ಪುತ್ರ ಕಾಂತೇಶ್ ಗೆ ಟಿಕೆಟ್ ನೀಡುವಂತೆ ಬೇಡಿಕೆ ಮುಂದಿಟ್ಟಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಪಕ್ಷ ಚನ್ನಬಸಪ್ಪ ಅವರಿಗೆ ಶಿವಮೊಗ್ಗ ನಗರ ಕ್ಷೇತ್ರದಿಂದ ಟಿಕೆಟ್ ಘೋಷಣೆ ಮಾಡಿತ್ತು.
ಈಶ್ವರಪ್ಪ ಅವರಂತಹ ನಾಯಕರನ್ನು ಪ್ರಶಂಸಿಸುವುದರ ಮೂಲಕ ಬಿಜೆಪಿ ತಾನು ಅಕ್ರಮ ಚಟುವಟಿಕೆಗಳನ್ನು ಹಾಗೂ ಭ್ರಷ್ಟಾಚಾರವನ್ನು ಅನುಮೋದಿಸುತ್ತದೆ ಎಂಬ ಸಂದೇಶ ರವಾನೆ ಮಾಡಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಟೀಕಾಪ್ರಹಾರ ನಡೆಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


