ಕಳೆದ ಐದು ವರ್ಷಗಳಲ್ಲಿ ಗುಜರಾತ್‌ನಲ್ಲಿ 81 ಲಾಕಪ್ ಡೆತ್; ಇದು ದೇಶದಲ್ಲಿಯೇ ಅತಿ ಹೆಚ್ಚು
ಗುಜರಾತ್‌ನಲ್ಲಿ ಕಳೆದ ಐದು ವರ್ಷಗಳಲ್ಲಿ 81 ಲಾಕಪ್ ಡೆತ್ ಗಳು ವರದಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಕಸ್ಟಡಿ ಸಾವುಗಳು ಸಂಭವಿಸಿವೆ.

ನವದೆಹಲಿ: ಗುಜರಾತ್‌ನಲ್ಲಿ ಕಳೆದ ಐದು ವರ್ಷಗಳಲ್ಲಿ 81 ಲಾಕಪ್ ಡೆತ್ ಗಳು ವರದಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಕಸ್ಟಡಿ ಸಾವುಗಳು ಸಂಭವಿಸಿವೆ.
ಗುಜರಾತ್ ನಂತರ ಮಹಾರಾಷ್ಟ್ರದಲ್ಲಿ ಲಾಕಪ್ ಡೆತ್ ವರದಿಯಾಗಿದ್ದು, ಪೊಲೀಸರ ವಶದಲ್ಲಿದ್ದಾಗ 80 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ತಿಳಿಸಿದೆ.
ಏಪ್ರಿಲ್ 1, 2018 ರಿಂದ ಮಾರ್ಚ್ 31, 2023 ರವರೆಗೆ ದೇಶದ ವಿವಿಧ ಭಾಗಗಳಲ್ಲಿ 687 ಜನ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಹೇಳಿದ್ದಾರೆ.
ಗುಜರಾತ್‌ನಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾಗ 81 ಸಾವುಗಳು ವರದಿಯಾಗಿದ್ದರೆ, ಮಹಾರಾಷ್ಟ್ರದಲ್ಲಿ ಈ ಅವಧಿಯಲ್ಲಿ 80 ಸಾವುಗಳು ಸಂಭವಿಸಿವೆ ಎಂದು ಲಿಖಿತ ಪ್ರಶ್ನೆಗೆ ಉತ್ತರಿಸಿದ್ದಾರೆ.
ಮಧ್ಯಪ್ರದೇಶದಲ್ಲಿ 50, ಬಿಹಾರದಲ್ಲಿ 47, ಉತ್ತರ ಪ್ರದೇಶದಲ್ಲಿ 41 ಮತ್ತು ತಮಿಳುನಾಡಿನಲ್ಲಿ 36 ಪೊಲೀಸ್ ಕಸ್ಟಡಿ ಸಾವುಗಳು ವರದಿಯಾಗಿವೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


