ಲೋಕಸಭೆಯಲ್ಲಿ ಧ್ವನಿ ಮತದ ಮೂಲಕ ದೆಹಲಿ ಸೇವಾ ಮಸೂದೆ ಅಂಗೀಕಾರ
ಕೇಂದ್ರ ಸರ್ಕಾರ ದೆಹಲಿ ಆಡಳಿತ ಸೇವೆಗಳ ನಿಯಂತ್ರಣ ಸಂಬಂಧ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಬದಲಾಯಿಸುವ ರಾಷ್ಟ್ರ ರಾಜಧಾನಿ ದೆಹಲಿ ಪ್ರದೇಶ ಸರ್ಕಾರ ತಿದ್ದುಪಡಿ ಮಸೂದೆ, 2023 ಅನ್ನು ಗುರುವಾರ ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ.

ನವದೆಹಲಿ: ಕೇಂದ್ರ ಸರ್ಕಾರ ದೆಹಲಿ ಆಡಳಿತ ಸೇವೆಗಳ ನಿಯಂತ್ರಣ ಸಂಬಂಧ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಬದಲಾಯಿಸುವ ರಾಷ್ಟ್ರ ರಾಜಧಾನಿ ದೆಹಲಿ ಪ್ರದೇಶ ಸರ್ಕಾರ ತಿದ್ದುಪಡಿ ಮಸೂದೆ, 2023 ಅನ್ನು ಗುರುವಾರ ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಾತಿಗಳ ಮೇಲೆ ನಿಯಂತ್ರಣ ಹೊಂದುವ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡಿಸಿದ್ದ ದೆಹಲಿ ಸೇವಾ ಮಸೂದೆಯನ್ನು ಇಂದು ಲೋಕಸಭೆಯಲ್ಲಿ ವಿರೋಧ ಪಕ್ಷಗಳ ವಾಕ್‌ಔಟ್ ನಡುವೆ ಅಂಗೀಕರಿಸಲಾಯಿತು.
ಸುಮಾರು ನಾಲ್ಕು ಗಂಟೆಗಳ ಸುದೀರ್ಘ ಚರ್ಚೆಯ ನಂತರ ದೆಹಲಿ ಸೇವಾ ಮಸೂದೆಯನ್ನು ಅಂಗೀಕರಿಸಲಾಗಿದೆ.
ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತ್ತು ದೆಹಲಿಯಲ್ಲಿ ಕಾನೂನು ರೂಪಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆ. ದೆಹಲಿ ಕೇಂದ್ರಾಡಳಿತ ಪ್ರದೇಶವಾಗಿರುವುದರಿಂದ ನಿಯಮಗಳನ್ನು ರೂಪಿಸುವ ಸಂಪೂರ್ಣ ಹಕ್ಕು ಕೇಂದ್ರಕ್ಕೆ ಇದೆ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.
ಮಸೂದೆಯನ್ನು ತರಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಕೈಜೋಡಿಸಿರುವ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅಮಿತ್ ಶಾ, ಮಸೂದೆ ಅಂಗೀಕಾರವಾದರೆ ಪ್ರತಿಪಕ್ಷಗಳ ಮೈತ್ರಿ ಮುರಿದು ಬೀಳಲಿದೆ ಎಂದು ಭವಿಷ್ಯ ನುಡಿದರು.
ದೆಹಲಿಯಲ್ಲಿ ಚುನಾಯಿತ ಸರ್ಕಾರವು ರಾಜಧಾನಿಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಾತಿಗಳ ಮೇಲೆ ನಿಯಂತ್ರಣವನ್ನು ಹೊಂದಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಅಧಿಕಾರ ಇಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಸುಪ್ರೀಂ ಆದೇಶವನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರ ಕಳೆದ ಮೇ ತಿಂಗಳಲ್ಲಿ ಹೊರಡಿಸಿದ ಸುಗ್ರೀವಾಜ್ಞೆಯನ್ನು ಈ ಮಸೂದೆ ಬದಲಾಯಿಸುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


