'ಪ್ರತಿಪಕ್ಷಗಳ ಒಗ್ಗಟ್ಟಿಗೆ ಬಿಜೆಪಿ ಹೆದರಿದೆ': ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣಕ್ಕೆ ನಿತೀಶ್ ಪ್ರತಿಕ್ರಿಯೆ
ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಬಿಜೆಪಿಯು ಪ್ರತಿಪಕ್ಷಗಳ ಒಗ್ಗಟ್ಟಿಗೆ ಹೆದರುತ್ತಿದೆ ಎಂದು ಶುಕ್ರವಾರ ಹೇಳಿದ್ದಾರೆ.

ಪಾಟ್ನಾ: ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಬಿಜೆಪಿಯು ಪ್ರತಿಪಕ್ಷಗಳ ಒಗ್ಗಟ್ಟಿಗೆ ಹೆದರುತ್ತಿದೆ ಎಂದು ಶುಕ್ರವಾರ ಹೇಳಿದ್ದಾರೆ.
ಮುಂಬೈನಲ್ಲಿ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ನಡೆಯಲಿರುವ ಪ್ರತಿಪಕ್ಷಗಳ ಮೈತ್ರಿಕೂಟ INDIA ಸಭೆಯಲ್ಲಿ ಸೀಟು ಹಂಚಿಕೆ ಸೇರಿದಂತೆ ಎಲ್ಲಾ ವಿಷಯಗಳನ್ನು ನಿರ್ಧರಿಸಲಾಗುವುದು ಎಂದು ಜೆಡಿಯು ಮುಖ್ಯಸ್ಥ ತಿಳಿಸಿದ್ದಾರೆ.
ಇಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ನಿತೀಶ್, ಕೇಂದ್ರದ ಮೋದಿ ಸರ್ಕಾರವು 'ಇಂಡಿಯಾ' ಮೈತ್ರಿಕೂಟದಿಂದ ಆತಂಕಗೊಂಡಿರುವುದು ಸ್ಪಷ್ಟವಾಗಿದೆ ಮತ್ತು 2024 ರ ಲೋಕಸಭೆ ಚುನಾವಣೆಯಲ್ಲಿ ಬಿಹಾರವನ್ನು ಬಿಜೆಪಿ ಮುಕ್ತ ಮಾಡಲಾಗುವುದು ಎಂದು ಹೇಳಿದ್ದಾರೆ.
ಜನರ ಕಲ್ಯಾಣಕ್ಕಾಗಿ ಯಾವುದೇ ಕೆಲಸ ಮಾಡದೆ ಕೇವಲ ಪ್ರಚಾರ ಮಾಡುವುದರಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಿತೀಶ್ ಕುಮಾರ್ ಅವರು, ಯಾವುದೇ ಕೆಲಸ ಆಗುತ್ತಿಲ್ಲ. ಸದನದಲ್ಲಿ ಹಿಂಸಾಚಾರ ಘಟನೆ ನಡೆದ ಸ್ಥಳಗಳ ಬಗ್ಗೆ ಯಾವುದೇ ಹೇಳಿಕೆ ನೀಡುತ್ತಿಲ್ಲ. ಅಧಿವೇಶನ ನಡೆಯುತ್ತಿದ್ದರೂ ನೀವು ಮಾತ್ರ ಹೊರಗೆ ತಿರುಗುತ್ತಿದ್ದೀರಿ ಎಂದು ಸಂಸತ್ತಿನಲ್ಲಿ ಪ್ರಧಾನಿ ಮೋದಿ ಹಾಜರಾತಿಯನ್ನು ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


