ದೇಶ

ಮಣಿಪುರ ಹಿಂಸಾಚಾರ: ಸಿಬಿಐ ತನಿಖೆ ಚುರುಕು; 29 ಮಹಿಳಾ ಅಧಿಕಾರಿಗಳು ಸೇರಿದ 53 ಅಧಿಕಾರಿಗಳ ತಂಡ ನಿಯೋಜನೆ!

ಮಣಿಪುರ ಜನಾಂಗೀಯ ಹಿಂಸಾಚಾರ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಿರುವ ಸಿಬಿಐ ಬುಧವಾರ ವಿವಿಧ ಶ್ರೇಣಿಗಳಿಂದ 29 ಮಹಿಳಾ ಅಧಿಕಾರಿಗಳು ಸೇರಿದಂತೆ 53 ಅಧಿಕಾರಿಗಳನ್ನು ನಿಯೋಜಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪುರ ಹಿಂಸಾಚಾರ: ಸಿಬಿಐ ತನಿಖೆ ಚುರುಕು; 29 ಮಹಿಳಾ ಅಧಿಕಾರಿಗಳು ಸೇರಿದ 53 ಅಧಿಕಾರಿಗಳ ತಂಡ ನಿಯೋಜನೆ!
ಸಿಬಿಐ ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಮಣಿಪುರ ಜನಾಂಗೀಯ ಹಿಂಸಾಚಾರ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸಿರುವ ಸಿಬಿಐ ಬುಧವಾರ ವಿವಿಧ ಶ್ರೇಣಿಗಳಿಂದ 29 ಮಹಿಳಾ ಅಧಿಕಾರಿಗಳು ಸೇರಿದಂತೆ 53 ಅಧಿಕಾರಿಗಳನ್ನು ನಿಯೋಜಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲವ್ಲಿ ಕಟಿಯಾರ್ ಮತ್ತು ನಿರ್ಮಲಾ ದೇವಿ ಸೇರಿದಂತೆ ಮೂವರು ಉಪ ಮಹಾ ನಿರೀಕ್ಷಕರ ಮಟ್ಟದ ಅಧಿಕಾರಿಗಳು (ಡೆಪ್ಯೂಟಿ ಇನ್ಸ್ ಪೆಕ್ಟರ್ ಜನರಲ್)  ರಾಜ್ಯದಲ್ಲಿನ ಹಿಂಸಾಚಾರ ಪ್ರಕರಣಗಳ ತನಿಖೆಗೆ ತಮ್ಮ ತಂಡಗಳನ್ನು ಮುನ್ನಡೆಸಲಿದ್ದಾರೆ ಎಂದು ಅವರು ಹೇಳಿದರು.

ಎಲ್ಲಾ ಅಧಿಕಾರಿಗಳು ಜಂಟಿ ನಿರ್ದೇಶಕ ಘನಶ್ಯಾಮ್ ಉಪಾಧ್ಯಾಯ ಅವರಿಗೆ ವರದಿ ಮಾಡಲಿದ್ದಾರೆ. ಅವರು ವಿವಿಧ ಪ್ರಕರಣಗಳ ತನಿಖೆಯನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಅಧಿಕಾರಿ ತಿಳಿಸಿದರು. 

ವಿಪಕ್ಷಗಳ ನಿಯೋಗದ ಸದಸ್ಯರ ಪ್ರಕಾರ ಮಣಿಪುರದಲ್ಲಿ ಮೇ ತಿಂಗಳಿನಿಂದಲೂ ನಡೆದ ಹಿಂಸಾಚಾರದಲ್ಲಿ ಒಟ್ಟು 179 ಜನರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗಿದೆ. ಆದರೆ ಸ್ಥಳಾಂತರಗೊಂಡವರ ಸಂಖ್ಯೆ 60,000 ಮತ್ತು ಪರಿಹಾರ ಶಿಬಿರಗಳಲ್ಲಿ 40,000 ಎಂದು ಅಂದಾಜಿಸಲಾಗಿದೆ. ಸಾವಿರಾರು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ವರದಿಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.