ರಕ್ಷಣಾ ಬೇಹುಗಾರಿಕೆ: ಕೆನಡಾ ಮೂಲದ ಉದ್ಯಮಿಯನ್ನು ಬಂಧಿಸಿದ ಸಿಬಿಐ
ರಕ್ಷಣಾ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಮೂಲದ ಉದ್ಯಮಿಯೊಬ್ಬರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಇದೇ ಪ್ರಕರಣ ಸಂಬಂಧ ಕಳೆದ ಮೇ ತಿಂಗಳಲ್ಲಿ ಪತ್ರಕರ್ತ ಮತ್ತು ಮಾಜಿ ನೌಕಾಪಡೆ ಕಮಾಂಡರ್ ಅವರನ್ನು ಬಂಧಿಸಲಾಗಿತ್ತು.

ನವದೆಹಲಿ: ರಕ್ಷಣಾ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಮೂಲದ ಉದ್ಯಮಿಯೊಬ್ಬರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಇದೇ ಪ್ರಕರಣ ಸಂಬಂಧ ಕಳೆದ ಮೇ ತಿಂಗಳಲ್ಲಿ ಪತ್ರಕರ್ತ ಮತ್ತು ಮಾಜಿ ನೌಕಾಪಡೆ ಕಮಾಂಡರ್ ಅವರನ್ನು ಬಂಧಿಸಲಾಗಿತ್ತು.
2019 ರಲ್ಲಿ ಕೆನಡಾದಲ್ಲಿ ಖಾಯಂ ಪೌರತ್ವ ಪಡೆದಿದ್ದ ಉದ್ಯಮಿ ರಾಹುಲ್ ಗಗ್ಗಲ್ ಅವರನ್ನು ಸೋಮವಾರ ದೆಹಲಿಗೆ ಆಗಮಿಸುತ್ತಿದ್ದಂತೆ ಬಂಧಿಸಲಾಯಿತು ಎಂದು ಅವರು ತಿಳಿಸಿದ್ದಾರೆ.
ವಿಶೇಷ ನ್ಯಾಯಾಲಯವು ರಾಹುಲ್ ಗಗ್ಗಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ನಾಲ್ಕು ದಿನಗಳ ಕಾಲ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಕಸ್ಟಡಿಗೆ ನೀಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ರಕ್ಷಣಾ ಇಲಾಖೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಸಂಗ್ರಹಿಸಿ ವಿದೇಶಿ ಗುಪ್ತಚರ ಸಂಸ್ಥೆಗಳಿಗೆ ರವಾನಿಸಿದ ಆರೋಪದಲ್ಲಿ ಪತ್ರಕರ್ತ ವಿವೇಕ್ ರಘುವಂಶಿ ಮತ್ತು ಮಾಜಿ ನೌಕಾಪಡೆಯ ಕಮಾಂಡರ್ ಆಶಿಶ್ ಪಾಠಕ್ ಅವರನ್ನು ಕಳೆದ ಮೇಲೆ 16 ರಂದು ಸಿಬಿಐ ಬಂಧಿಸಿತ್ತು.
ಕಳೆದ ತಿಂಗಳು ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಸಿಬಿಐ ರಘುವಂಶಿ ಮತ್ತು ಪಾಠಕ್ ಅವರನ್ನು ಅಧಿಕೃತ ರಹಸ್ಯ ಕಾಯಿದೆಯ ಉಲ್ಲಂಘನೆ ಮತ್ತು ಸಂಬಂಧಿತ ಅಪರಾಧಗಳಲ್ಲಿ ಆರೋಪಿಗಳೆಂದು ಹೆಸರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


