ದೇಶ

ಸೆಪ್ಟೆಂಬರ್ 18 ರಿಂದ ಐದು ದಿನ ಸಂಸತ್ತಿನ ವಿಶೇಷ ಅಧಿವೇಶನ: ಪ್ರಹ್ಲಾದ್ ಜೋಶಿ

ಸೆಪ್ಟೆಂಬರ್ 18 ರಿಂದ ಐದು ದಿನ ಸಂಸತ್ತಿನ ವಿಶೇಷ ಅಧಿವೇಶನವನ್ನು ಸರ್ಕಾರ ಕರೆದಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಗುರುವಾರ ತಿಳಿಸಿದ್ದಾರೆ.

ಸೆಪ್ಟೆಂಬರ್ 18 ರಿಂದ ಐದು ದಿನ ಸಂಸತ್ತಿನ ವಿಶೇಷ ಅಧಿವೇಶನ: ಪ್ರಹ್ಲಾದ್ ಜೋಶಿ
ಸಂಸತ್
Published On :

ನವದೆಹಲಿ: ಸೆಪ್ಟೆಂಬರ್ 18 ರಿಂದ ಐದು ದಿನ ಸಂಸತ್ತಿನ ವಿಶೇಷ ಅಧಿವೇಶನವನ್ನು ಸರ್ಕಾರ ಕರೆದಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಗುರುವಾರ ತಿಳಿಸಿದ್ದಾರೆ.  

ಸೆಪ್ಟೆಂಬರ್ 9 ಮತ್ತು 10 ರಂದು ರಾಷ್ಟ್ರ ರಾಜಧಾನಿಯಲ್ಲಿ ಜಿ- 20 ಶೃಂಗಸಭೆಯ ನಂತರ ನಡೆಯಲಿರುವ ಅಧಿವೇಶನದ ಕಾರ್ಯಸೂಚಿ ಕುರಿತು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಸೆಪ್ಟೆಂಬರ್ 18 ರಿಂದ 22 ರವರೆಗೆ  ಸಂಸತ್ತಿನ ವಿಶೇಷ ಅಧಿವೇಶನ (17 ನೇ ಲೋಕಸಭೆಯ 13 ನೇ ಅಧಿವೇಶನ ಮತ್ತು ರಾಜ್ಯಸಭೆಯ 261 ನೇ ಅಧಿವೇಶನ) ಕರೆಯಲಾಗಿದ್ದು, ಒಟ್ಟು ಐದು ಅವಧಿಗಳು ಇರಲಿವೆ. ಅಮೃತ ಮಹೋತ್ಸವದ ಸಂದರ್ಭದಲ್ಲಿ ಸಂಸತ್ತಿನಲ್ಲಿ  ಫಲಪ್ರದ ಚರ್ಚೆಗಳನ್ನು ಎದುರು ನೋಡಲಾಗುತ್ತಿದೆ ಎಂದು ಅವರು  X ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.