ಸಿಒಪಿ-28 ಶೃಂಗಸಭೆ: ದುಬೈ ತಲುಪಿದ ಪ್ರಧಾನಿ ಮೋದಿ, ಹವಾಮಾನ ಬದಲಾವಣೆ ತಗ್ಗಿಸುವ ಬಗ್ಗೆ ವಿಶ್ವನಾಯಕರೊಂದಿಗೆ ಚರ್ಚೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ದುಬೈಗೆ ಭೇಟಿ ನೀಡಿದ್ದು, ವಿಶ್ವಸಂಸ್ಥೆಯ ಕಾನ್ಫರೆನ್ಸ್ ಆಫ್ ಪಾರ್ಟೀಸ್(ಸಿಒಪಿ-28) ಜೊತೆಗೆ ನಡೆಯಲಿರುವ ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ.

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ದುಬೈಗೆ ಭೇಟಿ ನೀಡಿದ್ದು, ವಿಶ್ವಸಂಸ್ಥೆಯ ಕಾನ್ಫರೆನ್ಸ್ ಆಫ್ ಪಾರ್ಟೀಸ್(ಸಿಒಪಿ-28) ಜೊತೆಗೆ ನಡೆಯಲಿರುವ ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ.
ಯುಎಇ ಉಪ ಪ್ರಧಾನಿ ಶೇಖ್ ಸೈಫ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಮೋದಿ ಅವರನ್ನು ದುಬೈ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ದುಬೈ ಭೇಟಿ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, 'ಸಿಒಪಿ–28 ಶೃಂಗಸಭೆಯಲ್ಲಿ ಭಾಗವಹಿಸಲು ದುಬೈಗೆ ಬಂದಿಳಿದಿದ್ದೇನೆ. ಸಭೆಯ ಕಾರ್ಯಕಲಾಪಗಳನ್ನು ಎದುರು ನೋಡುತ್ತಿದ್ದೇನೆ' ಎಂದು ಪೋಸ್ಟ್ ಮಾಡಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಮಾತನಾಡಿ, 'ಪ್ರಧಾನಿ ಮೋದಿ ಜಾಗತಿಕ ನಾಯಕರೊಂದಿಗೆ ಸಭೆ ನಡೆಸುತ್ತಾರೆ ಮತ್ತು ಹವಾಮಾನ ಕ್ರಮವನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ವಿಶೇಷ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ' ಎಂದು ಹೇಳಿದ್ದಾರೆ.
ಇದನ್ನೂ ಓದಿ: COP28: ಡಿ.3ರಂದು ದುಬೈನಲ್ಲಿ ನಡೆಯುವ ನಿರ್ಣಾಯಕ ಹವಾಮಾನ-ಆರೋಗ್ಯ ಸಮ್ಮೇಳನಕ್ಕೆ ಭಾರತವು ನಿಯೋಗ ಕಳುಹಿಸುತ್ತಿಲ್ಲ?
ಪ್ರಧಾನಿ ಮೋದಿ ಹೋಟೆಲ್‌ಗೆ ಆಗಮಿಸುತ್ತಿದ್ದಂತೆ ದುಬೈನಲ್ಲಿರುವ ಭಾರತೀಯ ಸಮುದಾಯದ ಪ್ರಧಾನಿ ಮೋದಿಯವರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. 'ಅವರ ಸ್ವಾಗತದಿಂದ ನಾನು ತೀವ್ರ ಭಾವುಕನಾಗಿದ್ದೇನೆ. ಅವರ ಬೆಂಬಲ ಮತ್ತು ಉತ್ಸಾಹ ನಮ್ಮ ಸಂಸ್ಕೃತಿ ಮತ್ತು ಬಂಧಗಳಿಗೆ ಸಾಕ್ಷಿಯಾಗಿದೆ' ಎಂದು ಪ್ರಧಾನಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಯುಎಇ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆ ಸಿಒಪಿ–28ನೇ ಶೃಂಗ ಸಭೆ ನಡೆಸುತ್ತಿದೆ. ಈ ವೇಳೆ ಪ್ರಧಾನಿ ಮೂರು ಉನ್ನತ ಮಟ್ಟದ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ. ಶೃಂಗ ಸಭೆ ನ.30ರಿಂದ ಡಿ.12ರವರೆಗೆ ನಡೆಯಲಿದೆ.
ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆ ಸಿಒಪಿ 28ರ ಉನ್ನತ ಮಟ್ಟದ ವಿಭಾಗವಾಗಿದೆ. ಹಸಿರುಮನೆ ಅನಿಲ ಹೊರಸೂಸುವಿಕೆಯನ್ನು ಕಡಿಮೆ ಮಾಡುವ ಮತ್ತು ಹವಾಮಾನ ಬದಲಾವಣೆಯನ್ನು ಪರಿಣಾಮಕಾರಿಯಾಗಿ ಎದುರಿಸುವ ಮಾರ್ಗಗಳ ಕುರಿತು ಚರ್ಚಿಸಲು ಹಲವಾರು ವಿಶ್ವ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


