10 ವರ್ಷಗಳ ಕೆಸಿಆರ್ ಆಡಳಿತದಿಂದ ಜನ ಬೇಸತ್ತಿದ್ದರು: ತೆಲಂಗಾಣ ಗೆಲುವಿನ ಕುರಿತು ಡಿಕೆ ಶಿವಕುಮಾರ್ ಹೇಳಿಕೆ
10 ವರ್ಷಗಳ ಕೆಸಿಆರ್ ಆಡಳಿತದಿಂದ ಜನ ಬೇಸತ್ತು, ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ನಂಬಿ ತೆಲಂಗಾಣದಲ್ಲಿ ಗೆಲುವು ನೀಡಿದ್ಜದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಹೈದರಾಬಾದ್: 10 ವರ್ಷಗಳ ಕೆಸಿಆರ್ ಆಡಳಿತದಿಂದ ಜನ ಬೇಸತ್ತು, ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ನಂಬಿ ತೆಲಂಗಾಣದಲ್ಲಿ ಗೆಲುವು ನೀಡಿದ್ಜದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಹೈದರಾಬಾದ್ ನ ಗಾಂಧಿಭವನದಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಮಾತನಾಡಿದ ಡಿಕೆ ಶಿವ ಕುಮಾರ್, ಕರ್ನಾಟಕದ ನಂತರ ದಕ್ಷಿಣ ಭಾರತದಲ್ಲಿ (South India) ಕಾಂಗ್ರೆಸ್ ಪರ ಅಲೆ ಶುರುವಾಗಿದೆ. ಬದಲಾವಣೆ ಬಯಸಿ ಜನರು ಕಾಂಗ್ರೆಸ್ಗೆ ಮತ ನೀಡಿದ್ದಾರೆ. ಬದಲಾವಣೆಯಿಂದಾಗಿ ಕಾಂಗ್ರೆಸ್ಗೆ ನಿಶ್ಚಳ ಬಹುಮತ ಬಂದಿದೆ.
ಕೆ ಚಂದ್ರಶೇಖರ್ ರಾವ್ ಅವರ 10 ವರ್ಷಗಳ ಆಡಳಿತದಿಂದ ಜನ ಬೇಸತ್ತಿದ್ದರು. ಭ್ರಷ್ಟಾಚಾರ, ಕುಟುಂಬ ರಾಜಕಾರಣ ಜನತೆ ಕಾಂಗ್ರೆಸ್ ನತ್ತ ಮುಖ ಮಾಡುವಂತೆ ಮಾಡಿದೆ. ಕರ್ನಾಟಕ, ಮಹಾರಾಷ್ಟ್ರದಿಂದ ನಮ್ಮ ನಾಯಕರು ಇಲ್ಲಿ ಬಂದು ಕೆಲಸ ಮಾಡಿದ್ದಾರೆ. ಇದು ಸಾಮೂಹಿಕ ನಾಯಕತ್ವದ ಗೆಲುವು ಎಂದು ಹೇಳಿದರು.
ಟೀಕೆಗಳಿಗೆ ಡಿಕೆಶಿ ಪ್ರತಿಕ್ರಿಯೆ
ಮುಂಜಾಗ್ರತ ಕ್ರಮವಾಗಿ ಎಲ್ಲಾ ಶಾಸಕರನ್ನು ಕರೆದುಕೊಂಡು ಬರಲು ನಾವೆಲ್ಲರೂ ಸಜ್ಜಾಗಿದ್ದೇವೆ. ಹೈಕಮಾಂಡ್ ನೀಡಿದ ಕೆಲಸವನ್ನು ನಾವು ಮಾಡಿದ್ದೇವೆ. ಪಕ್ಷದಲ್ಲಿ ಹಿರಿಯರಿದ್ದು, ಮುಂದಿನ ನಿರ್ಧಾರವನ್ನು ಅವರು ತೆಗೆದುಕೊಳ್ಳಲಿದ್ದಾರೆ ಎಂದು ಅವರು ಹೇಳಿದರು.
ಅಂತೆಯೇ ಬಿಆರ್ಎಸ್ ನಾಯಕರ ಟೀಕೆಗಳ ಕುರಿತು ಮಾತನಾಡಿದ ಡಿಕೆಶಿ, ಅವರ ಟೀಕೆಗಳಿಗೆ ಜನರೇ ಉತ್ತರ ನೀಡಿದ್ದಾರೆ, ಮುಂದಿನ ದಿನಗಳಲ್ಲಿ ಪ್ರತಿಕ್ರಿಯೆ ನೀಡಲಾಗುತ್ತದೆ. ಗೆದ್ದಂತಹ ಶಾಸಕರನ್ನುಕರೆದುಕೊಂಡು ಹೋಗುವ ಜವಾಬ್ದಾರಿಯನ್ನ ಜಿಲ್ಲಾ ಚುನಾವಣೆ ಉಸ್ತುವಾರಿಗಳಿಗೆ ನೀಡಲಾಗಿದೆ. ಈ ಹಿನ್ನೆಲೆ ತಮ್ಮ ವ್ಯಾಪ್ತಿಯ ಶಾಸಕರನ್ನು ಕರೆದುಕೊಂಡು ಬರಲು ಉಸ್ತುವಾರಿಗಳು ತೆಲಂಗಾಣಕ್ಕೆ ಹೋಗಿದ್ದಾರೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


