ದೇಶ

ಒಡಿಶಾ: ದಲಿತ ಯುವತಿ ಮೇಲೆ ಬ್ಯೂಟಿ ಪಾರ್ಲರ್ ಮಾಲೀಕನಿಂದ ಅತ್ಯಾಚಾರ, ಬ್ಲ್ಯಾಕ್ ಮೇಲ್

22 ವರ್ಷದ ದಲಿತ ಯುವತಿ ಮೇಲೆ ಅತ್ಯಾಚಾರ ಎಸಗಿ ಆಕೆಯ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಬ್ಲಾಕ್‌ಮೇಲ್ ಮಾಡುತ್ತಿರುವ ಆರೋಪದ ಮೇಲೆ ಬ್ಯೂಟಿ ಪಾರ್ಲರ್ ಮಾಲೀಕನನ್ನು ಪಟ್ಟಮುಂಡೈ ಪೊಲೀಸರು ಭಾನುವಾರ..

ಒಡಿಶಾ: ದಲಿತ ಯುವತಿ ಮೇಲೆ ಬ್ಯೂಟಿ ಪಾರ್ಲರ್ ಮಾಲೀಕನಿಂದ ಅತ್ಯಾಚಾರ, ಬ್ಲ್ಯಾಕ್ ಮೇಲ್
ಸಾಂದರ್ಭಿಕ ಚಿತ್ರ
Published On :

ಕೇಂದ್ರಪಾರ: 22 ವರ್ಷದ ದಲಿತ ಯುವತಿ ಮೇಲೆ ಅತ್ಯಾಚಾರ ಎಸಗಿ ಆಕೆಯ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಬ್ಲಾಕ್‌ಮೇಲ್ ಮಾಡುತ್ತಿರುವ ಆರೋಪದ ಮೇಲೆ ಬ್ಯೂಟಿ ಪಾರ್ಲರ್ ಮಾಲೀಕನನ್ನು ಒಡಿಶಾದ ಪಟ್ಟಮುಂಡೈ ಪೊಲೀಸರು ಭಾನುವಾರ ಬಂಧಿಸಿದ್ದಾರೆ. 

ಬಂಧಿತ ಆರೋಪಿಯನ್ನು ನೀಲಿಕಂಠ ಗ್ರಾಮದ 35 ವರ್ಷದ ಪ್ರತಾಪ್ ಸಾಹೂ ಎಂದು ಗುರುತಿಸಲಾಗಿದೆ.

ಪಟ್ಟಮುಂಡೈ ಐಐಸಿ ರಂಜಿತ್ ಮೊಹಂತಿ ಮಾತನಾಡಿ, ಆರೋಪಿಯು ಕೆಲವು ತಿಂಗಳ ಹಿಂದೆ ಸಂತ್ರಸ್ತೆಯ ಜೊತೆ ಸ್ನೇಹ ಬೆಳೆಸಿ ಚೌಡಕುಲತ್‌ನಲ್ಲಿರುವ ತನ್ನ ಬ್ಯೂಟಿ ಪಾರ್ಲರ್‌ನಲ್ಲಿ ಆಕೆಗೆ ಕೆಲಸ ಕೊಡಿಸಿದ್ದು, ಕಳೆದ ತಿಂಗಳು, ಪಾರ್ಲರ್‌ನೊಳಗೆ ನಿದ್ದೆ ಮಾತ್ರೆ ಬೆರೆಸಿದ ತಂಪು ಪಾನೀಯ ನೀಡಿ ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆಯ ನಗ್ನ ಚಿತ್ರ ಮತ್ತು ವೀಡಿಯೋಗಳನ್ನು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾನೆ.

ಸಂತ್ರಸ್ತೆ ಪ್ರಜ್ಞೆ ಬಂದಾಗ ಆಕೆಗೆ ಖಾಸಗಿ ಫೋಟೋಗಳನ್ನು ತೋರಿಸಿ ಬ್ಲಾಕ್ ಮೇಲ್ ಮಾಡಿ, ಸುಮಾರು ಒಂದು ತಿಂಗಳ ಕಾಲ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಏನಾದ್ರೂ ಬಹಿರಂಗ ಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಸಹ ಹಾಕಿದ್ದಾನೆ.

ಕಳೆದ ವಾರ, ಮಹಿಳೆ ಸಾಹೂ ಅವರ ಅಂಗಡಿಯನ್ನು ತೊರೆದು ಕೇಂದ್ರಪಾರ ಪಟ್ಟಣದ ಮತ್ತೊಂದು ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡಲು ಪ್ರಾರಂಭಿಸಿದರು. ಆಕೆಯ ಕೃತ್ಯದ ಬಗ್ಗೆ ಕೋಪಗೊಂಡ ಆರೋಪಿ ಶನಿವಾರ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಮತ್ತು ಆಕೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಅದೇ ದಿನ, ಮಹಿಳೆ ಪಟ್ಟಮುಂಡೈ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದು, ಅದರ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಆರೋಪಿ ವಿರುದ್ಧ ಐಪಿಸಿಯ ಸೆಕ್ಷನ್ 376, 420 ಮತ್ತು 506, ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 ಮತ್ತು 67 ಮತ್ತು ಎಸ್‌ಸಿ ಮತ್ತು ಎಸ್‌ಟಿ(ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3 ಅಡಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.