ದೇಶ

ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮಸೂದೆ ಅಂಗೀಕಾರ, ಪಿಒಕೆ ನಮ್ಮದು ಎಂದ ಅಮಿತ್ ಶಾ

ಜಮ್ಮು ಮತ್ತು ಕಾಶ್ಮೀರ ಮೀಸಲಾತಿ ತಿದ್ದುಪಡಿ ಮಸೂದೆ -2023 ಹಾಗೂ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ತಿದ್ದುಪಡಿ ಮಸೂದೆ 2023 ಅನ್ನು ಬುಧವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.

ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮಸೂದೆ ಅಂಗೀಕಾರ, ಪಿಒಕೆ ನಮ್ಮದು ಎಂದ ಅಮಿತ್ ಶಾ
ಅಮಿತ್ ಶಾ
Published On :

ದೆಹಲಿ: ಜಮ್ಮು ಮತ್ತು ಕಾಶ್ಮೀರ ಮೀಸಲಾತಿ ತಿದ್ದುಪಡಿ ಮಸೂದೆ -2023 ಹಾಗೂ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ತಿದ್ದುಪಡಿ ಮಸೂದೆ 2023 ಅನ್ನು ಬುಧವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.

ಇಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಈ ಎರಡು ಮಸೂದೆಗಳನ್ನು ಮಂಡಿಸಿದರು. 

ಮಸೂದೆ ಮಂಡಿಸಿ ಮಾತನಾಡಿದ ಅಮಿತ್ ಶಾ, ಮೋದಿ ಸರ್ಕಾರದ ಗುರಿ ಪಿಒಕೆ ಅಂತ ಘೋಷಿಸಿದರು. ಯಾರಿಗೂ ಕಾಶ್ಮೀರಿಗಳ ಬಗ್ಗೆ ಕಾಳಜಿ ಇರಲಿಲ್ಲ. ಆದರೆ ಈಗ ಅವರಿಗೆ ನ್ಯಾಯ ಕೊಡಿಸುವ ಸಮಯ ಬಂದಿದೆ. ಈ ಕೆಲಸವನ್ನು ನರೇಂದ್ರ ಮೋದಿ ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಮೋದಿ ಸರ್ಕಾರ ಕೇವಲ ಉಗ್ರರನ್ನು ನಿರ್ಮೂಲನೆ ಮಾಡಿಲ್ಲ. ಉಗ್ರರಿಗೆ ಹಣ ನೀಡುತ್ತಿದ್ದ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲು ಕ್ರಮ ತೆಗೆದುಕೊಂಡಿದೆ ಎಂದು ಅಮಿತ್ ಶಾ ತಿಳಿಸಿದರು.

ಕಾಶ್ಮೀರದ ಈ ಎರಡು ಮಸೂದೆಗಳಲ್ಲಿ ಒಂದು ಮಸೂದೆ ಮಹಿಳೆ ಸೇರಿದಂತೆ ಇಬ್ಬರು ಕಾಶ್ಮೀರಿ ವಲಸಿಗ ಸಮುದಾಯದ ಸದಸ್ಯರನ್ನು ವಿಧಾನಸಭೆಗೆ ನಾಮನಿರ್ದೇಶನ ಮಾಡಲು ಅವಕಾಶ ಕಲ್ಪಿಸುತ್ತದೆ ಎಂದು ಕೇಂದ್ರ ಗೃಹ ಸಚಿವರು ಲೋಕಸಭೆಗೆ ತಿಳಿಸಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಈ ಎರಡು ಮಸೂದೆಗಳು ಕಳೆದ 70 ವರ್ಷಗಳಿಂದ ತಮ್ಮ ಹಕ್ಕುಗಳಿಂದ ವಂಚಿತರಾದವರಿಗೆ ನ್ಯಾಯವನ್ನು ನೀಡಲಿವೆ ಎಂದು ಅಮಿತ್ ಶಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.