ದೇಶ

ತಮಿಳುನಾಡು: ಪ್ರವಾಹ ಸಂತ್ರಸ್ತರಿಗೆ 6,000 ರೂ. ಹಣಕಾಸಿನ ನೆರವು ಘೋಷಿಸಿದ ಸಿಎಂ ಸ್ಟಾಲಿನ್

ಮೈಚಾಂಗ್ ಚಂಡಮಾರುತದ ಹೊಡೆತಕ್ಕೆ ಸಿಲುಕಿ ತಮಿಳುನಾಡು ತತ್ತರಿಸಿದೆ. ರಾಜಧಾನಿ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್‌ಪೇಟ್ ಮತ್ತಿತರ ಪ್ರದೇಶಗಳು ತೀವ್ರ ಪ್ರವಾಹವನ್ನು ಎದುರಿಸುತ್ತಿದೆ.

ತಮಿಳುನಾಡು: ಪ್ರವಾಹ ಸಂತ್ರಸ್ತರಿಗೆ 6,000 ರೂ. ಹಣಕಾಸಿನ ನೆರವು ಘೋಷಿಸಿದ ಸಿಎಂ ಸ್ಟಾಲಿನ್
ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ ಜನರ ಚಿತ್ರ
Published On :

ತಮಿಳುನಾಡು: ಮೈಚಾಂಗ್ ಚಂಡಮಾರುತದ ಹೊಡೆತಕ್ಕೆ ಸಿಲುಕಿ ತಮಿಳುನಾಡು ತತ್ತರಿಸಿದೆ. ರಾಜಧಾನಿ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್‌ಪೇಟ್  ಮತ್ತಿತರ ಪ್ರದೇಶಗಳು ತೀವ್ರ ಪ್ರವಾಹವನ್ನು ಎದುರಿಸುತ್ತಿದೆ.

ಸದ್ಯ ಮಳೆ ನಿಂತಿದ್ದರೂ ಹಲವು ಪ್ರದೇಶಗಳು ಜಲಾವೃತವಾಗಿದ್ದು, ದೈನಂದಿನ ಜನಜೀವನದ ಮೇಲೆ ಅಪಾರ ಪರಿಣಾಮ ಬೀರಿದ್ದು, ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.  ಈ ಮಧ್ಯೆ ಪ್ರವಾಹ ಪೀಡಿತ ಸಂತ್ರಸ್ತರಿಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ರೂ. 6,000 ಹಣಕಾಸಿನ ನೆರವು ಘೋಷಿಸಿದ್ದಾರೆ. 

ಚಂಡಮಾರುತದಿಂದ ಜೀವನೋಪಾಯಕ್ಕೆ ತೊಂದರೆಯಾದ ಜನರಿಗೆ ಆರ್ಥಿಕ ನೆರವನ್ನು ಪಡಿತರ ಅಂಗಡಿಗಳಲ್ಲಿ ನಗದು ರೂಪದಲ್ಲಿ ಪಾವತಿಸಲಾಗುವುದು ಎಂದು ಸರ್ಕಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.ಅಲ್ಲದೆ, ಇತರ ವರ್ಗಗಳ ಅಡಿಯಲ್ಲಿ ಪರಿಹಾರವನ್ನು ಹೆಚ್ಚಿಸಲಾಗುವುದು ಎಂದು ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.