ಸಂಸತ್ ಭದ್ರತಾ ಲೋಪ: ಆರು ಆರೋಪಿಗಳ ಬಂಧಿಸಿದ ಪೊಲೀಸರು, 3 ತಿಂಗಳ ತಯಾರಿ!
ಸಂಸತ್ ದಾಳಿಯ 22ನೇ ವಾರ್ಷಿಕೋತ್ಸವದಂದೆ ಲೋಕಸಭೆಯಲ್ಲಿ ಪ್ರಮುಖ ಭದ್ರತಾ ಲೋಪ ನಡೆದ ಪ್ರಕರಣಕ್ಕೆ ಒಟ್ಟು ಆರು ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ನವದೆಹಲಿ: ಸಂಸತ್ ದಾಳಿಯ 22ನೇ ವಾರ್ಷಿಕೋತ್ಸವದಂದೆ ಲೋಕಸಭೆಯಲ್ಲಿ ಪ್ರಮುಖ ಭದ್ರತಾ ಲೋಪ ನಡೆದ ಪ್ರಕರಣಕ್ಕೆ ಒಟ್ಟು ಆರು ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣ ಸಂಬಂಧ ಮೊದಲು ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ದೆಹಲಿ ಪೊಲೀಸರು ಪುರುಷ ಮತ್ತು ಮಹಿಳೆ ಇಬ್ಬರನ್ನೂ ಸಂಸತ್ ಭವನದ ಮುಂದೆ ಬಂಧಿಸಿದ್ದರೆ ಮತ್ತಿಬ್ಬರು ಸಂಸತ್ತಿನ ಒಳಗೆ ಬಂಧಿಸಲಾಗಿದೆ ಎಂದು ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ನವದೆಹಲಿ) ಪ್ರಣವ್ ತಾಯಲ್ ಖಚಿತಪಡಿಸಿದ್ದಾರೆ.
ಸಂಸತ್ತಿನ ಹೊರಗೆ ಬಂಧಿಸಿದವರನ್ನು ಸಂಸತ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಕರೆದೊಯ್ದ ವಿಚಾರಣೆ ನಡೆಸಿದ್ದು ಅವರು ಹರಿಯಾಣದ ಹಿಸಾರ್ ನಿವಾಸಿ ನೀಲಂ (42) ಮತ್ತು ಮಹಾರಾಷ್ಟ್ರದ ಲಾತೂರ್ ನಿವಾಸಿ ಅಮೋಲ್ ಶಿಂಧೆ (25) ಎಂದು ಗುರುತಿಸಲಾಗಿದೆ. ಮತ್ತಿಬ್ಬರನ್ನು ಉತ್ತರ ಪ್ರದೇಶದ ಸಾಗರ್ ಶರ್ಮಾ ಮತ್ತು ಮೈಸೂರಿನ ಮನೋರಂಜನ್ ಎಂದು ತಿಳಿದುಬಂದಿದೆ.
ಇನ್ನು ವಿಕ್ಕಿ ಶರ್ಮಾ ಮತ್ತು ಆತನ ಪತ್ನಿಯನ್ನು ಹರಿಯಾಣದ ಹಿಸ್ಸಾರ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಗುರುಗ್ರಾಮದಲ್ಲಿ ತಂಗಿದ್ದು ಕಳೆದ ಮೂರು ತಿಂಗಳಿನಿಂದ ತಯಾರಿ ನಡೆಸಿದ್ದರು ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


