ಮಾಸ್ಕ್ ಧರಿಸಿ: ದೇಶದಲ್ಲಿ ಮತ್ತೆ ಕೋವಿಡ್-19 ಸೋಂಕು ಹೆಚ್ಚಳ
ದೇಶದಲ್ಲಿ ಮತ್ತೆ ಕೋವಿಡ್-19 ಸೋಂಕು ಹೆಚ್ಚಳವಾಗುತ್ತಿದ್ದು, ಇಂದು ಒಂದೇ ದಿನ ದೇಶಾದ್ಯಂತ 252 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ತಿಳಿದುಬಂದಿದೆ.

ನವದೆಹಲಿ: ದೇಶದಲ್ಲಿ ಮತ್ತೆ ಕೋವಿಡ್-19 ಸೋಂಕು ಹೆಚ್ಚಳವಾಗುತ್ತಿದ್ದು, ಇಂದು ಒಂದೇ ದಿನ ದೇಶಾದ್ಯಂತ 252 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ತಿಳಿದುಬಂದಿದೆ.
ಹೌದು.. ಇಂದು ದೇಶಾದ್ಯಂತ 252 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಈ ವರ್ಷ ಜೂನ್ 2 ರಿಂದೀಚೆಗೆ ಇದು ದಿನವೊಂದರಲ್ಲಿ ದಾಖಲಾದ ಗರಿಷ್ಟ ಪ್ರಮಾಣದ ಸೋಂಕು ಪ್ರಕರಣಗಳಾಗಿದೆ.
ಇಂದಿನ ಪ್ರಕರಣಗಳ ಸಂಖ್ಯೆಯೂ ಸೇರಿದಂತೆ ದೇಶದಲ್ಲಿ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 1,091 ಕ್ಕೆ ಏರಿದೆ ಎಂದು ಬುಧವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.
ಅಂತೆಯೇ ದೇಶದ ಒಟ್ಟಾರೆ ಕೋವಿಡ್ ಪ್ರಕರಣಗಳ ಸಂಖ್ಯೆ 4.50 ಕೋಟಿ (4,50,03,593) ದಾಟಿದ್ದು, ಸಾವಿನ ಸಂಖ್ಯೆ 5,33,308 ಕ್ಕೆ ದಾಖಲಾಗಿದೆ ಎಂದು ದತ್ತಾಂಶಗಳಿಂದ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


