ಛತ್ತೀಸ್ ಗಢ ಸ್ಪೀಕರ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಾಜಿ ಸಿಎಂ ರಮಣ್ ಸಿಂಗ್
ಛತ್ತೀಸ್ ಗಢದಲ್ಲಿ ಸ್ಪೀಕರ್ ಹುದ್ದೆಗೆ ಮಾಜಿ ಸಿಎಂ ರಮಣ್ ಸಿಂಗ್ ನಾಮಪತ್ರ ಸಲ್ಲಿಸಿದ್ದಾರೆ.

ರಾಯ್ಪುರ: ಛತ್ತೀಸ್ ಗಢದಲ್ಲಿ ಸ್ಪೀಕರ್ ಹುದ್ದೆಗೆ ಮಾಜಿ ಸಿಎಂ ರಮಣ್ ಸಿಂಗ್ ನಾಮಪತ್ರ ಸಲ್ಲಿಸಿದ್ದಾರೆ.
ಛತ್ತೀಸ್ ಗಢದಲ್ಲಿ ನೂತನ ವಿಧಾನಸಭೆ ಅಸ್ತಿತ್ವಕ್ಕೆ ಬಂದಿದ್ದು, ಸ್ಪೀಕರ್ ನೇಮಕವಾಗಬೇಕಿದೆ. ಡಿ.19 ರಿಂದ ಛತ್ತೀಸ್ ಗಢದ 6 ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಲಿದ್ದು, ಬಿಜೆಪಿ ಶಾಸಕ ರಾಮ್ ವಿಚರ್ ನೇತಮ್ ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿದ್ದಾರೆ.
ರಾಜ್ ನಂದ್ ಗಾಂವ್ ನಿಂದ ಆಯ್ಕೆಯಾಗಿರುವ 71 ವರ್ಷದ ರಮಣ್ ಸಿಂಗ್ ಸದನದಲ್ಲಿ ಅತ್ಯಂತ ಹಿರಿಯ ಶಾಸಕರಾಗಿದ್ದಾರೆ. ಈಗ ಸ್ಪೀಕರ್ ಹುದ್ದೆಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ, ಉಪ ಮುಖ್ಯಮಂತ್ರಿಗಳಾದ ಅರುಣ್ ಸಾವೊ ಮತ್ತು ವಿಜಯ್ ಶರ್ಮಾ, ನಿರ್ಗಮಿತ ಛತ್ತೀಸ್ಗಢ ವಿಧಾನಸಭೆಯಲ್ಲಿ ಸ್ಪೀಕರ್ ಆಗಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಚರಣ್ ದಾಸ್ ಮಹಂತ್ ಮತ್ತು ಮಾಜಿ ಸಿಎಂ ಭೂಪೇಶ್ ಬಘೇಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಆಡಳಿತ ಮತ್ತು ವಿರೋಧ ಪಕ್ಷದ ಹಿರಿಯ ನಾಯಕರು ಸಿಂಗ್ ಅವರ ನಾಮನಿರ್ದೇಶನವನ್ನು ಬೆಂಬಲಿಸುವ ಪ್ರಸ್ತಾವನೆಗಳನ್ನು ಪಕ್ಷಗಳು ಸಲ್ಲಿಸಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಗ್, ಛತ್ತೀಸ್ಗಢದಲ್ಲಿ ಎಲ್ಲರನ್ನೂ ಒಗ್ಗೂಡಿಸಿ ಕೆಲಸ ಮಾಡುವುದು ತಮ್ಮ ಹೊಸ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


