ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಇಡಿ ಸಮನ್ಸ್
ರದ್ದಾದ ಅಬಕಾರಿ ನೀತಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಡಿಸೆಂಬರ್ 21 ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಸೋಮವಾರ ಸಮನ್ಸ್ ಜಾರಿ ಮಾಡಿದೆ.

ನವದೆಹಲಿ: ರದ್ದಾದ ಅಬಕಾರಿ ನೀತಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಡಿಸೆಂಬರ್ 21 ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಸೋಮವಾರ ಸಮನ್ಸ್ ಜಾರಿ ಮಾಡಿದೆ.
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಎರಡನೇ ಬಾರಿ ದೆಹಲಿ ಸಿಎಂಗೆ ಸಮನ್ಸ್ ಜಾರಿ ಮಾಡಿದೆ.
ಈ ಹಿಂದೆ ನವೆಂಬರ್ 2 ರಂದು ಕೇಜ್ರಿವಾಲ್ ಅವರಿಗೆ ಇಡಿ ಸಮನ್ಸ್ ನೀಡಿತ್ತು. ಆದರೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಲು ದೆಹಲಿ ಸಿಎಂ ನಿರಾಕರಿಸಿದ್ದರು.
ಈಗ ಮತ್ತೊಮ್ಮೆ ಎಎಪಿಯ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಅವರಿಗೆ ಇಡಿ ಸಮನ್ಸ್ ನೀಡಿದ್ದು, ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಪ್ರಶ್ನಿಸಲು ಮತ್ತು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅವರ ಹೇಳಿಕೆ ದಾಖಲಿಸಿಕೊಳ್ಳಲು ಸಮನ್ಸ್ ನೀಡಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


