ದೇಶ

ಕೆಲಸ ನಿರಾಕರಿಸಿದ್ದಕ್ಕೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಗ್ಯಾಲರಿಯಲ್ಲಿ ಯುವಕ ಆತ್ಮಹತ್ಯೆ

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನ ಗ್ಯಾಲರಿ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಸೋಮವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲಸ ನಿರಾಕರಿಸಿದ್ದಕ್ಕೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಗ್ಯಾಲರಿಯಲ್ಲಿ ಯುವಕ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Published On :

ಕೋಲ್ಕತ್ತಾ: ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನ ಗ್ಯಾಲರಿ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಸೋಮವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಯುವಕನನ್ನು 21 ವರ್ಷದ ಧನಂಜಯ್ ಬಾರಿಕ್ ಎಂದು ಗುರುತಿಸಲಾಗಿದ್ದು, ಮೈದಾನದ ಕೆಲಸಗಾರನ ಮಗ ಎಂದು ಪೊಲೀಸರು ಹೇಳಿದ್ದಾರೆ.

ಭಾನುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಬಾರಿಕ್ ಇಂದು ಸ್ಟೇಡಿಯಂನ ಮೇಲಿನ ಗ್ಯಾಲರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತ ಯುವಕ ಬಹುಶಃ ಈಡನ್ ಗಾರ್ಡನ್ಸ್‌ನಲ್ಲಿ ತಮ್ಮ ತಂದೆ ಮತ್ತು ಚಿಕ್ಕಪ್ಪನಂತೆಯೇ ಗ್ರೌಂಡ್ ಸ್ಟಾಫ್ ಆಗಿ ಕೆಲಸ ಮಾಡಲು ಬಯಸಿದ್ದ. ಆದರೆ ಕೆಲಸ ನಿರಾಕರಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಇದು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಯುವಕನ ಕುಟುಂಬ ಸದಸ್ಯರು ಭಾನುವಾರ ಮೈದಾನ ಪೊಲೀಸ್ ಠಾಣೆಗೆ ನಾಪತ್ತೆ ದೂರು ನೀಡಿದ್ದರು. ಮೃತ ಯುವಕ ಈಡನ್ ಗಾರ್ಡನ್ಸ್ ಸಿಬ್ಬಂದಿಗೆ ಮೀಸಲಾದ ಕ್ವಾರ್ಟರ್ಸ್‌ನಲ್ಲಿ ತನ್ನ ತಂದೆ ಮತ್ತು ಚಿಕ್ಕಪ್ಪನೊಂದಿಗೆ ವಾಸಿಸುತ್ತಿದ್ದರು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.