ಕೋವಿಡ್-19: ಜೆಎನ್.1 ರೂಪಾಂತರಿ, ಆತಂಕಪಡುವ ಅಗತ್ಯವಿಲ್ಲ- ಡಾ. ಎನ್.ಕೆ. ಆರೋರಾ
ಕೋವಿಡ್-19 ರೂಪಾಂತರಿ ಜೆಎನ್.1 ಬಗ್ಗೆ ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ಭಾರತೀಯ ಸಾರ್ಸ್-ಕೋವ್-2 ಜಿನೋಮ್ ಒಕ್ಕೂಟದ ( ಐಎನ್ ಎಸ್ ಎಸಿಒಜಿ) ಮುಖ್ಯಸ್ಥರಾದ ಡಾ.ಎನ್.ಕೆ. ಆರೋರಾ ಹೇಳಿದ್ದಾರೆ.

ನವದೆಹಲಿ: ಕೋವಿಡ್-19 ರೂಪಾಂತರಿ ಜೆಎನ್.1 ಬಗ್ಗೆ ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ಭಾರತೀಯ ಸಾರ್ಸ್-ಕೋವ್-2 ಜಿನೋಮ್ ಒಕ್ಕೂಟದ ( ಐಎನ್ ಎಸ್ ಎಸಿಒಜಿ) ಮುಖ್ಯಸ್ಥರಾದ ಡಾ.ಎನ್.ಕೆ. ಆರೋರಾ ಹೇಳಿದ್ದಾರೆ.
ಕೇರಳದಲ್ಲಿ ಒಂದು ಸಾವಿನ ವರದಿಯ ಹೊರತಾಗಿಯೂ, ಆತನ ಸಾವು ಕೇವಲ ವೈರಸ್ ಸೋಂಕಿನಿಂದ ಆಗಿಲ್ಲ. ಆತನಿಗೆ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳಿದ್ದವು ಎಂದು ಅವರು ಹೇಳಿದ್ದಾರೆ.
ಮೃತನು ಹೃದಯ, ಶ್ವಾಸಕೋಶ ಮತ್ತು ಮೂತ್ರಪಿಂಡ ಕಾಯಿಲೆಗಳಿಂದ ಬಳಲುತ್ತದ್ದರು. ಈ ಕಾರಣದಿಂದ ಸಾವು ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಕೇವಲ ಜಿಎನ್.1 ಸೋಂಕಿನಿಂದ ಅಲ್ಲ ಎಂದು ಅರೋರಾ ತಿಳಿಸಿದ್ದಾರೆ.
ವಿವಿಧ ರಾಜ್ಯಗಳಲ್ಲಿ ಜೀನೋಮ್ ಸೀಕ್ವೆನ್ಸಿಂಗ್ ನಡೆಯುತ್ತಿರುವುದರಿಂದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಮಾದರಿ ಸಂಖ್ಯೆಗಳು ಸೀಮಿತವಾಗಿದ್ದರೂ, ಅವುಗಳನ್ನು ರಾಷ್ಟ್ರವ್ಯಾಪಿ ಸಂಗ್ರಹಿಸಲಾಗುತ್ತಿದೆ ಎಂದು ಡಾ. ಅರೋರಾ ಒತ್ತಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


