ಮತ್ತೆ ಕೊರೋನಾ ಭೀತಿ: ಆತಂಕ ಪಡುವ ಅಗತ್ಯವಿಲ್ಲ, ಎಚ್ಚರಿಕೆ ವಹಿಸಿ ಎಂದ ಕೇಂದ್ರ ಸರ್ಕಾರ
ದೇಶದಲ್ಲಿ ಮಹಾಮಾರಿ ಕೋವಿಡ್-19 ಮತ್ತೆ ಆತಂಕವನ್ನು ಹುಟ್ಟಿಸುತ್ತಿದೆ. ಈ ನಡುವಲ್ಲೇ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಬುಧವಾರ ಆರೋಗ್ಯ ಸೌಲಭ್ಯಗಳ ಸನ್ನದ್ಧತೆಯನ್ನು ಪರಿಶೀಲನೆ ನಡೆಸಿದ್ದು, ಆತಂಕ ಪಡುವ ಅಗತ್ಯವಿಲ್ಲ, ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.

ನವದೆಹಲಿ: ದೇಶದಲ್ಲಿ ಮಹಾಮಾರಿ ಕೋವಿಡ್-19 ಮತ್ತೆ ಆತಂಕವನ್ನು ಹುಟ್ಟಿಸುತ್ತಿದೆ. ಈ ನಡುವಲ್ಲೇ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಬುಧವಾರ ಆರೋಗ್ಯ ಸೌಲಭ್ಯಗಳ ಸನ್ನದ್ಧತೆಯನ್ನು ಪರಿಶೀಲನೆ ನಡೆಸಿದ್ದು, ಆತಂಕ ಪಡುವ ಅಗತ್ಯವಿಲ್ಲ, ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.
ಮಾಂಡವಿಯಾ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರು ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳೊಂದಿಗೆ (ಆರೋಗ್ಯ) ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಕೇಂದ್ರ ಸಚಿವಾಲಯ ಮತ್ತು ಇತರೆ ಇಲಾಖೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಸಭೆಯಲ್ಲಿ ಮಾತನಾಡಿದ ಮನ್ಸುಖ್ ಮಾಂಡವಿಯಾ ಅವರು, ಸೋಂಕು ಕುರಿತು ಆತಂಕ ಪಡುವ ಅಗತ್ಯವಿಲ್ಲ. ಆದರೆ, ಎಚ್ಚರದಿಂದಿರಬೇಕು. ರಾಜ್ಯಗಳಿಗೆ ಕೇಂದ್ರದಿಂದ ಎಲ್ಲಾ ರೀತಿಯ ಬೆಂಬಲ ಸಿಗಲಿದೆ ಎಂದು ಹೇಳಿದರು.
ರಾಜ್ಯಗಳು ಆಸ್ಪತ್ರೆಯ ಸನ್ನದ್ಧತೆ, ಕಣ್ಗಾವಲು ಹೆಚ್ಚಿಸುವುದು ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿರುವುದು ಮುಖ್ಯವಾಗಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಎಲ್ಲಾ ಆಸ್ಪತ್ರೆಗಳಲ್ಲಿ ಅಣಕು ಡ್ರಿಲ್ಗಳನ್ನು ನಡೆಸಬೇಕು. ಹಬ್ಬಗಳ ಮುನ್ನ ಸೋಂಕು ತಡೆಗಟ್ಟುವ ಕ್ರಮಗಳನ್ನು ಆಯಾ ರಾಜ್ಯಗಳು ಕೈಗೊಳ್ಳಬೇಕೆಂದು ತಿಳಿಸಿದರು.
"ನಮ್ಮ ಸನ್ನದ್ಧತೆಯಲ್ಲಿ ಕೊರತೆ ಇರಬಾರದು. ಆರೋಗ್ಯವು ರಾಜಕೀಯದ ಕ್ಷೇತ್ರವಲ್ಲ. ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯಗಳ ಬೆಂಬಲಕ್ಕೆ ನಿಲ್ಲಲಿದೆ. ಎಲ್ಲಾ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡುವ ಸಮಯವಾಗಿದೆ ಇದಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


