ದೇಶ

ಉದ್ಯೋಗಕ್ಕಾಗಿ ಭೂ ಹಗರಣ: ತೇಜಸ್ವಿ ಯಾದವ್, ಲಾಲು ಪ್ರಸಾದ್ ಯಾದವ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್

ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯವು ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಅವರ ತಂದೆ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಉದ್ಯೋಗಕ್ಕಾಗಿ ಭೂ ಹಗರಣ: ತೇಜಸ್ವಿ ಯಾದವ್, ಲಾಲು ಪ್ರಸಾದ್ ಯಾದವ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್
ಲಾಲು ಪ್ರಸಾದ್ ಯಾದವ್ - ತೇಜಸ್ವಿ ಯಾದವ್
Published On :

ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯವು (ಇ.ಡಿ) ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಅವರ ತಂದೆ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದ ಅಡಿ ಡಿಸೆಂಬರ್ 22 ರಂದು ದೆಹಲಿಯ ಕಚೇರಿಯಲ್ಲಿ ಕೇಂದ್ರ ತನಿಖಾ ಸಂಸ್ಥೆಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ತೇಜಸ್ವಿ ಯಾದವ್ (34) ಅವರನ್ನು ಕೇಳಿದ್ದರೆ, ಲಾಲು ಪ್ರಸಾದ್ (75) ಅವರನ್ನು ಮುಂದಿನ ವಾರ ಡಿಸೆಂಬರ್ 27 ರಂದು ತಮ್ಮ ಹೇಳಿಕೆಗಳನ್ನು ದಾಖಲಿಸಲು ಹಾಜರಾಗುವಂತೆ ತಿಳಿಸಲಾಗಿದೆ.

ಏಪ್ರಿಲ್ 11 ರಂದು ಈ ಪ್ರಕರಣದಲ್ಲಿ ಇ.ಡಿ ಸುಮಾರು ಎಂಟು ಗಂಟೆಗಳ ಕಾಲ ತೇಜಸ್ವಿ ಯಾದವ್ ಅವರನ್ನು ಒಮ್ಮೆ ವಿಚಾರಣೆಗೆ ಒಳಪಡಿಸಿದೆ. ಆದರೆ, ಲಾಲು ಪ್ರಸಾದ್ ಅವರಿಗೆ ಸಮನ್ಸ್ ನೀಡಿರುವುದು ಇದೇ ಮೊದಲು.

ಲಾಲು ಪ್ರಸಾದ್ ಕುಟುಂಬದ 'ಆಪ್ತ' ಅಮಿತ್ ಕತ್ಯಾಲ್ ಅವರ ವಿಚಾರಣೆ ನಂತರ ತೇಜಸ್ವಿ ಮತ್ತು ಲಾಲು ಪ್ರಸಾದ್ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ನವೆಂಬರ್‌ನಲ್ಲಿ ಇ.ಡಿಯು ಕತ್ಯಾಲ್ ಅವರನ್ನು ಬಂಧಿಸಿತ್ತು.

ಲಾಲು ಪ್ರಸಾದ್ ಯಾದವ್ ಅವರು 2004 ಮತ್ತು 2009 ರ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದಾಗ ಅವರ ಕುಟುಂಬಕ್ಕೆ ಉಡುಗೊರೆಯಾಗಿ ನೀಡಿದ ಅಥವಾ ಮಾರಾಟ ಮಾಡಿದ ಜಮೀನುಗಳಿಗೆ ಪ್ರತಿಯಾಗಿ ರೈಲ್ವೆಯಲ್ಲಿ ನೇಮಕಾತಿ ಮಾಡಲಾಗಿದೆ.

ಜಾಹೀರಾತು ನೀಡದೆ ಅಥವಾ ಸಾರ್ವಜನಿಕರ ಗಮನಕ್ಕೂ ತಾರದೆ ತಮ್ಮ ನೆಚ್ಚಿನ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗಿದೆ. ಈ ನೇಮಕಾತಿಗಾಗಿ ಭಾರತೀಯ ರೈಲ್ವೆಯ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಉಲ್ಲಂಘಿಸಲಾಗಿದೆ ಎಂದು ಸಿಬಿಐ ಆರೋಪಿಸಿದೆ.

ಮುಂಬೈ, ಜಬಲ್‌ಪುರ್, ಕೋಲ್ಕತ್ತಾ, ಜೈಪುರ ಮತ್ತು ಹಾಜಿಪುರದಲ್ಲಿರುವ ವಿವಿಧ ವಲಯ ರೈಲ್ವೆಗಳಲ್ಲಿ ಪಾಟ್ನಾದಿಂದ ಬದಲಿಗಳನ್ನು ನೇಮಿಸಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ. ಅಭ್ಯರ್ಥಿಗಳು ನೇರವಾಗಿ ಅಥವಾ ಅವರ ಹತ್ತಿರದ ಕುಟುಂಬದ ಸದಸ್ಯರ ಮೂಲಕ ಪ್ರಸಾದ್ ಅವರ ಕುಟುಂಬ ಸದಸ್ಯರಿಗೆ ಹೆಚ್ಚಿನ ರಿಯಾಯಿತಿ ದರದಲ್ಲಿ ಭೂಮಿಯನ್ನು ಮಾರಾಟ ಮಾಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.