ರಾಜ್ಯಸಭೆಯಲ್ಲೂ ಟೆಲಿಕಾಂ ಮಸೂದೆ ಅಂಗೀಕಾರ
ದೂರಸಂಪರ್ಕ ವಲಯವನ್ನು ನಿಯಂತ್ರಿಸುವ 138 ವರ್ಷಗಳಷ್ಟು ಹಳೆಯದಾದ ಭಾರತೀಯ ಟೆಲಿಗ್ರಾಫ್ ಕಾಯಿದೆಯನ್ನು ಬದಲಾಯಿಸಲು ಕೇಂದ್ರ ಸರ್ಕಾರ ಮಂಡಿಸಿದ್ದ ದೂರಸಂಪರ್ಕ ಮಸೂದೆ 2023 ಅನ್ನು ಗುರುವಾರ ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದೆ.

ನವದೆಹಲಿ: ದೂರಸಂಪರ್ಕ ವಲಯವನ್ನು ನಿಯಂತ್ರಿಸುವ 138 ವರ್ಷಗಳಷ್ಟು ಹಳೆಯದಾದ ಭಾರತೀಯ ಟೆಲಿಗ್ರಾಫ್ ಕಾಯಿದೆಯನ್ನು ಬದಲಾಯಿಸಲು ಕೇಂದ್ರ ಸರ್ಕಾರ ಮಂಡಿಸಿದ್ದ ದೂರಸಂಪರ್ಕ ಮಸೂದೆ 2023 ಅನ್ನು ಗುರುವಾರ ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದೆ.
ನಿನ್ನೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದ ದೂರಸಂಪರ್ಕ ಮಸೂದೆ, 2023 ಅನ್ನು ಇಂದು ಧ್ವನಿ ಮತದ ಮೂಲಕ ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದೆ.
ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಸೋಮವಾರ ಲೋಕಸಭೆಯಲ್ಲಿ ಟೆಲಿಕಾಂ ಮಸೂದೆಯನ್ನು ಮಂಡಿಸಿದ್ದರು ಮತ್ತು ಈ ಮಸೂದೆಗ ಕಳೆದ ಆಗಸ್ಟ್‌ನಲ್ಲಿ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು.
ಪ್ರಸ್ತಾವಿತ ಮಸೂದೆಯು ರಾಷ್ಟ್ರೀಯ ಭದ್ರತೆಯನ್ನು ಉಲ್ಲೇಖಿಸಿ, ಯಾವುದೇ ದೂರಸಂಪರ್ಕ ಸೇವೆಗಳನ್ನು ಸ್ಥಗಿತಗೊಳಿಸಬಹುದು, ನೆಟ್‌ವರ್ಕ್‌ಗಳು ಅಥವಾ ಅವುಗಳ ಘಟಕಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು, ನಿರ್ವಹಿಸಲು ಅಥವಾ ಅಮಾನತುಗೊಳಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರ ನೀಡುತ್ತದೆ.
ಅದೇ ರೀತಿ, ಪ್ರಸ್ತಾವಿತ ಶಾಸನವು ನಿರ್ದಿಷ್ಟ ವ್ಯಕ್ತಿಗಳಿಂದ ಕಳುಹಿಸಲಾದ ಅಥವಾ ಸ್ವೀಕರಿಸಿದ ನಿರ್ದಿಷ್ಟ ದೂರಸಂಪರ್ಕ ಸಾಧನಗಳ ಮೂಲಕ ಅಥವಾ ನಿರ್ದಿಷ್ಟ ವಿಷಯಗಳಿಗೆ ಸಂಬಂಧಿಸಿದ ಕೆಲವು ಸಂದೇಶಗಳನ್ನು "ಭಾರತದ ಸಾರ್ವಭೌಮತೆ, ಸಮಗ್ರತೆ ಮತ್ತು ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂತೆ ಇರಬಾರದು" ಎಂದು ಸೂಚನೆ ನೀಡುವ ಅಧಿಕಾರವನ್ನು ಸರ್ಕಾರಕ್ಕೆ ನೀಡುತ್ತದೆ".
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


