ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾ

ದೆಹಲಿ ಅಬಕಾರಿ ನೀತಿ ಪಿಎಂಎಲ್‌ಎ ಪ್ರಕರಣದಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾ
ಸಂಜಯ್ ಸಿಂಗ್
Published On :

ನವದೆಹಲಿ: ದೆಹಲಿ ಅಬಕಾರಿ ನೀತಿ ಪಿಎಂಎಲ್‌ಎ ಪ್ರಕರಣದಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.

ರೋಸ್ ಅವೆನ್ಯೂ ನ್ಯಾಯಾಲಯ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಜನವರಿ 10 ರವರೆಗೆ ವಿಸ್ತರಿಸಿತ್ತು. ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್ ಅವರು ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ತೀರ್ಪು ನೀಡಿದ್ದರು. 

ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಸಿಂಗ್ ಅವರಿಗೆ ಅದರ ಐದನೇ ಪೂರಕ ಚಾರ್ಜ್ ಶೀಟ್ ಮತ್ತು ಇತರ ಸಂಬಂಧಿತ ದಾಖಲೆಗಳ ಪ್ರತಿಯನ್ನು ನೀಡುವಂತೆ ನ್ಯಾಯಾಧೀಶರು ಜಾರಿ ನಿರ್ದೇಶನಾಲಯವನ್ನು ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.