ದೇಶ

ಖರ್ಗೆ ಪರ್ಗೆ ಎಲ್ಲಾ ಯಾರು?: INDIA ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಪ್ರಸ್ತಾವನೆ ಬಗ್ಗೆ ಜೆಡಿಯು ಶಾಸಕ ಟೀಕೆ

ಲೋಕಸಭಾ ಚುನಾವಣೆ-2024 ರ ಲೋಕಸಭಾ ಚುನಾವಣೆಗೆ ತಯಾರಿ ನಡೆಯುತ್ತಿದ್ದು ಮೋದಿ ವಿರುದ್ಧ INDIA ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆಯಾಗಬೇಕೆಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಖರ್ಗೆ ಪರ್ಗೆ ಎಲ್ಲಾ ಯಾರು?: INDIA ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಪ್ರಸ್ತಾವನೆ ಬಗ್ಗೆ ಜೆಡಿಯು ಶಾಸಕ ಟೀಕೆ
ಮಲ್ಲಿಕಾರ್ಜುನ ಖರ್ಗೆ- ನಿತೀಶ್ ಕುಮಾರ್
Published On :

ನವದೆಹಲಿ: ಲೋಕಸಭಾ ಚುನಾವಣೆ-2024 ರ ಲೋಕಸಭಾ ಚುನಾವಣೆಗೆ ತಯಾರಿ ನಡೆಯುತ್ತಿದ್ದು ಮೋದಿ ವಿರುದ್ಧ INDIA ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆಯಾಗಬೇಕೆಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

ಈ ಬಗ್ಗೆ ಜೆಡಿಯು ಶಾಸಕ ಗೋಪಾಲ್ ಮಂಡಲ್ ಪ್ರತಿಕ್ರಿಯೆ ನೀಡಿದ್ದು, ಸಾಮಾನ್ಯ ಜನಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ತಿಳಿದಿಲ್ಲ, ಬಿಹಾರ ಸಿಎಂ ನಿತೀಶ್ ಕುಮಾರ್ INDIA ದ ಪ್ರಧಾನಿ ಅಭ್ಯರ್ಥಿಯಾಗಬೇಕು ಎಂದು ಹೇಳಿದ್ದಾರೆ.
 
ಜನಸಾಮಾನ್ಯರಿಗೆ ಖರ್ಗೆ ಪರ್ಗೆ ಯಾರೂ ಗೊತ್ತಿಲ್ಲ. ಅವರು ಕಾಂಗ್ರೆಸ್ ನ ಅಧ್ಯಕ್ಷರೆಂಬುದು ನನಗೂ ಗೊತ್ತಿರಲಿಲ್ಲ. ಅವರು ಯಾರೆಂಬುದು ಯಾರಿಗೂ ಗೊತ್ತಿಲ್ಲ. ಆದರೆ ಸಾರ್ವಜನಿಕರಿಗೆ ನಿತೀಶ್ ಕುಮಾರ್ ಯಾರೆಂಬುದು ಗೊತ್ತು. ನಿತೀಶ್ ಕುಮಾರ್ ಪ್ರಧಾನಿಯಾಗಬೇಕು. ಅವರು ಭಾರತದಾದ್ಯಂತ ಜನಪ್ರಿಯರಾಗಿದ್ದಾರೆ, ”ಎಂದು ಮಂಡಲ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.