ದೆಹಲಿ: ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ, ಪತ್ರ ಪತ್ತೆ!
ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ಸಂಭವಿಸಿದ್ದು, ಘಟನ ಸ್ಥಳ ಚಾಣಕ್ಯಪುರಿ ರಾಜತಾಂತ್ರಿಕ ಆವರಣದಲ್ಲಿ ಪೊಲೀಸರು ಪತ್ರವೊಂದನ್ನು ವಶಕ್ಕೆ ಪಡೆದಿದ್ದಾರೆ.

ನವದೆಹಲಿ: ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ಸಂಭವಿಸಿದ್ದು, ಘಟನ ಸ್ಥಳ ಚಾಣಕ್ಯಪುರಿ ರಾಜತಾಂತ್ರಿಕ ಆವರಣದಲ್ಲಿ ಪೊಲೀಸರು ಪತ್ರವೊಂದನ್ನು ವಶಕ್ಕೆ ಪಡೆದಿದ್ದಾರೆ.
ಈ ಪತ್ರವನ್ನು ಇಸ್ರೇಲ್ ನ ರಾಯಭಾರಿಗೆ ಉದ್ದೇಶಿಸಲಾಗಿದೆ ಎಂದು ರಾಯಭಾರಿ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.
ಸಂಜೆ 5:53 ಕ್ಕೆ ರಾಯಭಾರ ಕಚೇರಿಯ ಹಿಂಭಾಗದಲ್ಲಿರುವ ಜಿಂದಾಲ್ ಹೌಸ್ನಿಂದ "ಜೋರಾದ ಧ್ವನಿ" ಕೇಳಿಸಿತ್ತು. ಆ ತಕ್ಷಣ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದ ನಂತರ, ಕ್ರೈಂ ಬ್ರಾಂಚ್, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಮತ್ತು ವಿಧಿವಿಜ್ಞಾನ ವಿಭಾಗದ ತಂಡಗಳು ಸ್ಥಳಕ್ಕೆ ಧಾವಿಸಿದ್ದವು. ಘಟನೆಯಲ್ಲಿ ಯಾರಿಗೂ ಹಾನಿಯುಂಟಾಗಿಲ್ಲ.
ಈ ಪ್ರದೇಶದಲ್ಲಿ ಸುಮಾರು ಮೂರು ಗಂಟೆಗಳ ಕಾಲ ಶೋಧ ಕಾರ್ಯಾಚರಣೆ ನಡೆಸಲಾಯಿತು. ರಾಷ್ಟ್ರೀಯ ತನಿಖಾ ಸಂಸ್ಥೆ ತಂಡವೂ ಸ್ಥಳವನ್ನು ಪರಿಶೀಲಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಸ್ಫೋಟ ಹಾಗೂ ಸ್ಥಳದಲ್ಲಿ ಪತ್ರ ಸಿಕ್ಕಿರುವುದು 2021 ರಲ್ಲಿ ರಾಯಭಾರ ಕಚೇರಿಯ ಎದುರು ನಡೆದ ಸ್ಫೋಟವನ್ನು ನೆನಪಿಸುತ್ತದೆ, ಅಂದು ನಡೆದ ಸ್ಫೋಟದಲ್ಲಿ ಕೆಲವು ಕಾರುಗಳು ಹಾನಿಗೊಳಗಾಗಿದ್ದವು. ಎನ್ಐಎ ಆ ಘಟನೆಯ ತನಿಖೆ ನಡೆಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


