ಮುಂಬೈನಲ್ಲಿ ಭಾರೀ ಅಗ್ನಿ ಅವಘಡ: 6 ಮಂದಿ ಸಜೀವ ದಹನ
ಮಹಾರಾಷ್ಟ್ರದ ಗ್ಲೌಸ್ ಕಾರ್ಖಾನೆಯೊಂದರಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ಸಂಭವಿಸಿರುವ ಭಾರೀ ಅಗ್ನಿ ಅವಘಡದಲ್ಲಿ ಆರು ಸಜೀವ ದಹನವಾಗಿರುವ ಘಟನೆ ನಡೆದಿದೆ.

ಮುಂಬೈ: ಮಹಾರಾಷ್ಟ್ರದ ಗ್ಲೌಸ್ ಕಾರ್ಖಾನೆಯೊಂದರಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ಸಂಭವಿಸಿರುವ ಭಾರೀ ಅಗ್ನಿ ಅವಘಡದಲ್ಲಿ ಆರು ಸಜೀವ ದಹನವಾಗಿರುವ ಘಟನೆ ನಡೆದಿದೆ.
ಇಂದು ಬೆಳಗಿನ 2 ಗಂಟೆಯ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಕಾರ್ಖಾನೆಯ ಒಳಗೆ ಸಿಲುಕಿದ್ದ 6 ಜನ ಸಾವಿಗೀಡಾಗಿದ್ದಾರೆ.
ಕೂಡಲೇ ಆವರಣದೊಳಗೆ ಮಲಗಿದ್ದ ಕಾರ್ಮಿಕರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಈ ವೇಳೆಗೆ ಇಡೀ ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡಿರುವುದು ಕಂಡು ಬಂದಿದೆ.
ಬಳಿಕ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ 6 ಜನರ ಮೃತದೇಹಗಳನ್ನ ಹೊರತೆಗೆದಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿ ಮೋಹನ್ ಮುಂಗ್ಸೆ ತಿಳಿಸಿದ್ದಾರೆ.
ಬೆಳಗಿನ ವೇಳೆಗೆ ಬೆಂಕಿ ಹತೋಟಿಗೆ ಬಂದಿದ್ದು, ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


