ಇದು ಅಮೃತ್ ಕಾಲದ ಮೊದಲ ಬಜೆಟ್: ನಿರ್ಮಲಾ ಸೀತಾರಾಮನ್ ರನ್ನು ಶ್ಲಾಘಿಸಿದ ಪ್ರಧಾನಿ ಮೋದಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಮಂಡಿಸಿದ 2023-24ನೇ ಸಾಲಿನ ಬಜೆಟ್ ಅನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ, ಇದು ಅಮೃತ್ ಕಾಲದ ಮೊದಲ ಬಜೆಟ್ ಎಂದು ಹೇಳಿದ್ದಾರೆ.

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಮಂಡಿಸಿದ 2023-24ನೇ ಸಾಲಿನ ಬಜೆಟ್ ಅನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ, ಇದು ಅಮೃತ್ ಕಾಲದ ಮೊದಲ ಬಜೆಟ್ ಎಂದು ಹೇಳಿದ್ದಾರೆ.
ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಈ ಬಜೆಟ್ ಭದ್ರ ಅಡಿಪಾಯ ಹಾಕಿದೆ. ಈ ಬಜೆಟ್ ಬಡವರು, ಮಧ್ಯಮ ವರ್ಗದ ಜನ, ರೈತರು ಸೇರಿದಂತೆ ಮಹತ್ವಾಕಾಂಕ್ಷೆಯ ಯುವ ಭಾರತದ ಕನಸುಗಳನ್ನು ಈಡೇರಿಸಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
"ದೇಶಕ್ಕಾಗಿ ಪರಂಪರಾಗತವಾಗಿ ಶ್ರಮಿಸುತ್ತಿರುವ 'ವಿಶ್ವಕರ್ಮ'ರು ಈ ದೇಶದ ಸೃಷ್ಟಿಕರ್ತರು. ಮೊದಲ ಬಾರಿಗೆ 'ವಿಶ್ವಕರ್ಮ' ತರಬೇತಿ ಮತ್ತು ಬೆಂಬಲಕ್ಕೆ ಸಂಬಂಧಿಸಿದ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ ಎಂದು ಪ್ರಧಾನಿ ತಿಳಿಸಿದರು.
"ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮಹಿಳೆಯರ ಜೀವನವನ್ನು ಸುಲಭಗೊಳಿಸಲು ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಮಹಿಳಾ ಸ್ವ-ಸಹಾಯ ಗುಂಪುಗಳನ್ನು ಇನ್ನಷ್ಟು ಹೆಚ್ಚಿಸುತ್ತವೆ. ಮನೆಯಲ್ಲಿ ಮಹಿಳೆಯರ ಸಬಲೀಕರಣಗೊಳಿಸಲು ವಿಶೇಷ ಉಳಿತಾಯ ಯೋಜನೆ ಪ್ರಾರಂಭಿಸಲಾಗುವುದು" ಎಂದು ಪ್ರಧಾನಿ ಮೋದಿ ಹೇಳಿದರು.
ಬಜೆಟ್ ನಲ್ಲಿ ಪರಿಸರ ಮತ್ತು ಹಸಿರೀಕರಣಕ್ಕೆ ಉತ್ತೇಜನ ನೀಡಲಾಗಿದೆ. ಹಸಿರು ಶಕ್ತಿ, ಹಸಿರು ಬೆಳವಣಿಗೆ ಮತ್ತು ಹಸಿರು ಮೂಲಸೌಕರ್ಯ ಹಾಗೂ ಹಸಿರು ಉದ್ಯೋಗಗಳನ್ನು ಮತ್ತಷ್ಟು ಸೃಷ್ಟಿಸುವ ಸುಸ್ಥಿರ ಭವಿಷ್ಯವನ್ನು ಬಜೆಟ್ ನಲ್ಲಿ ಘೋಷಿಸಲಾಗಿದೆ. ತಂತ್ರಜ್ಞಾನ ಮತ್ತು ಹೊಸ ಆರ್ಥಿಕತೆ ಮೇಲೂ ನಾವು ಗಮನಹರಿಸಿದ್ದೇವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


