ಬಿಜೆಪಿ ವಶದಲ್ಲಿದ್ದ ಅಮರಾವತಿ ಕೌನ್ಸಿಲ್ ಸ್ಥಾನ ಕಿತ್ತುಕೊಂಡ ಎಂವಿಎ
ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿಗೆ ತೀವ್ರ ಹಿನ್ನೆಡೆಯಾಗಿದ್ದು, ಅಮರಾವತಿ ಪದವೀಧರ ಕ್ಷೇತ್ರದಲ್ಲಿ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ(ಎಂವಿಎ) ಅಭ್ಯರ್ಥಿ ಧೀರಜ್ ಲಿಂಗಡೆ ಅವರು...

ಅಮರಾವತಿ: ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿಗೆ ತೀವ್ರ ಹಿನ್ನೆಡೆಯಾಗಿದ್ದು, ಅಮರಾವತಿ ಪದವೀಧರ ಕ್ಷೇತ್ರದಲ್ಲಿ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ(ಎಂವಿಎ) ಅಭ್ಯರ್ಥಿ ಧೀರಜ್ ಲಿಂಗಡೆ ಅವರು ಹಾಲಿ ಬಿಜೆಪಿ ಪರಿಷತ್ ಸದಸ್ಯ ರಂಜಿತ್ ಪಾಟೀಲ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಅಮರಾವತಿ ಪದವೀಧರರ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಗುರುವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಇಂದು ಮಧ್ಯಾಹ್ನ 1.30ಕ್ಕೆ ಮುಕ್ತಾಯವಾಗಿದೆ.
ರಾಜ್ಯ ವಿಧಾನಮಂಡಲದ ಮೇಲ್ಮನೆಯ ಇತರ ನಾಲ್ಕು ಸ್ಥಾನಗಳ ಫಲಿತಾಂಶಗಳು ಗುರುವಾರವೇ ಪ್ರಕಟವಾಗಿದ್ದು, ಆ ನಾಲ್ಕು ಸ್ಥಾನಗಳಲ್ಲಿ ಎರಡು ಸ್ಥಾನ ಎಂವಿಎ ಗೆದ್ದಿದೆ.
ಅಮರಾವತಿಯಲ್ಲಿ ಎಂವಿಎ ಅಭ್ಯರ್ಥಿ ಲಿಂಗಡೆ ಅವರು 46,344 ಮತಗಳನ್ನು ಪಡೆದರೆ, ಬಿಜೆಪಿಯ ಹಾಲಿ ಎಂಎಲ್ಸಿ ರಂಜಿತ್ ಪಾಟೀಲ್ 42,962 ಮತಗಳನ್ನು ಪಡೆದಿದ್ದಾರೆ ಎಂದು ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


