ಪಂಚಾಯತ್ ಚುನಾವಣೆ: ಪಶ್ಚಿಮ ಬಂಗಾಳ ಬಿಜೆಪಿ ಶಾಸಕ ಸುಮನ್ ಕಾಂಜಿಲಾಲ್ ಟಿಎಂಸಿಗೆ ಸೇರ್ಪಡೆ
ಪಶ್ಚಿಮ ಬಂಗಾಳ ಬಿಜೆಪಿ ಶಾಸಕ ಸುಮನ್ ಕಾಂಜಿಲಾಲ್ ಅವರು ಭಾನುವಾರ ಕೋಲ್ಕತ್ತಾದಲ್ಲಿ ಆಡಳಿತರೂಢ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ ಎಂದು ಟಿಎಂಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಕೋಲ್ಕತಾ: ಪಶ್ಚಿಮ ಬಂಗಾಳ ಬಿಜೆಪಿ ಶಾಸಕ ಸುಮನ್ ಕಾಂಜಿಲಾಲ್ ಅವರು ಭಾನುವಾರ ಕೋಲ್ಕತ್ತಾದಲ್ಲಿ ಆಡಳಿತರೂಢ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ ಎಂದು ಟಿಎಂಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಅಲಿಪುರ್‌ದವಾರ್‌ನ ಶಾಸಕ ಕಾಂಜಿಲಾಲ್ ಅವರಿಗೆ ಪಕ್ಷದ ಧ್ವಜವನ್ನು ಹಸ್ತಾಂತರಿಸುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.
ಈ ವರ್ಷ ರಾಜ್ಯದಲ್ಲಿ ನಡೆಯಲಿರುವ ಪಂಚಾಯತ್ ಚುನಾವಣೆಗೆ ಮುನ್ನ ಬಿಜೆಪಿ ನಾಯಕ ಕಾಂಜಿಲಾಲ್ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷಕ್ಕೆ ತಮ್ಮ ನಿಷ್ಠೆಯನ್ನು ಬದಲಾಯಿಸಿದ್ದಾರೆ.
ಬಿಜೆಪಿ ರಾಜ್ಯ ವಕ್ತಾರ ಸಾಮಿಕ್ ಭಟ್ಟಾಚಾರ್ಯ ಮಾತನಾಡಿ, ಕಾಂಜಿಲಾಲ್ ಅವರ ಪಕ್ಷ ತೊರೆದಿರುವುದರಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


