ದೇಶ

ರಾಜ್ಯಸಭೆ ಕಲಾಪ ವಿಡಿಯೋ ಮಾಡಿದ ಕಾಂಗ್ರೆಸ್ ಸಂಸದೆ ಬಜೆಟ್ ಅಧಿವೇಶನದಿಂದ ಅಮಾನತು

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಕಲಾಪ ಚಿತ್ರೀಕರಣ ಮಾಡಿದ್ದಕ್ಕಾಗಿ ಕಾಂಗ್ರೆಸ್ ಸಂಸದೆ ರಜನಿ ಅಶೋಕರಾವ್ ಪಾಟೀಲ್ ಅವರನ್ನು ಪ್ರಸ್ತುತ ಬಜೆಟ್ ಅಧಿವೇಶನದ ಉಳಿದ ಅವಧಿಗೆ ಶುಕ್ರವಾರ ಅಮಾನತುಗೊಳಿಸಿದ್ದಾರೆ.

ರಾಜ್ಯಸಭೆ ಕಲಾಪ ವಿಡಿಯೋ ಮಾಡಿದ ಕಾಂಗ್ರೆಸ್ ಸಂಸದೆ ಬಜೆಟ್ ಅಧಿವೇಶನದಿಂದ ಅಮಾನತು
ರಜನಿ ಅಶೋಕರಾವ್ ಪಾಟೀಲ್
Published On :

ನವದೆಹಲಿ: ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಕಲಾಪ ಚಿತ್ರೀಕರಣ ಮಾಡಿದ್ದಕ್ಕಾಗಿ ಕಾಂಗ್ರೆಸ್ ಸಂಸದೆ ರಜನಿ ಅಶೋಕರಾವ್ ಪಾಟೀಲ್ ಅವರನ್ನು ಪ್ರಸ್ತುತ ಬಜೆಟ್ ಅಧಿವೇಶನದ ಉಳಿದ ಅವಧಿಗೆ ಶುಕ್ರವಾರ ಅಮಾನತುಗೊಳಿಸಿದ್ದಾರೆ.

ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ವೇಳೆ ನಡೆದ ಗದ್ದಲವನ್ನು ಚಿತ್ರೀಕರಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದ ಧಂಖರ್ ಅವರು, ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸುವಂತೆ ರಾಜಕೀಯ ಪಕ್ಷಗಳ ನಾಯಕರಿಗೆ ಕೇಳಿದ್ದರು.

ನಂತರ, ಬಜೆಟ್ ಅಧಿವೇಶದಿಂದ ಪಾಟೀಲ್ ಅವರನ್ನು ಅಮಾನತುಗೊಳಿಸುವ ನಿರ್ಣಯ ಅಂಗೀಕರಿಸಲಾಗಿತ್ತು. ಆದರೆ ಈ ವಿಷಯದ ಕುರಿತು ಸಂಸದೀಯ ಹಕ್ಕು ಬಾಧ್ಯತೆ ಸಮಿತಿಯ ವರದಿ ಬಾಕಿ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.