ಅದಾನಿ ಸಮೂಹ ಸಂಸ್ಥೆಗಳ ವಿರುದ್ಧ ತನಿಖೆಗಾಗಿ 'ಸುಪ್ರೀಂ' ಮೆಟ್ಟಿಲೇರಿದ ಕಾಂಗ್ರೆಸ್ ನಾಯಕಿ
ಹಿಂಡೆನ್ಬರ್ಗ್ ಸಂಶೋಧನಾ ವರದಿ ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ಅದಾನಿ ಸಮೂಹ ಮತ್ತು ಅದರ ಸಹಚರರ ವಿರುದ್ಧ ತನಿಖೆ ನಡೆಸುವಂತೆ ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

ನವದೆಹಲಿ: ಹಿಂಡೆನ್ಬರ್ಗ್ ಸಂಶೋಧನಾ ವರದಿ ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ಅದಾನಿ ಸಮೂಹ ಮತ್ತು ಅದರ ಸಹಚರರ ವಿರುದ್ಧ ತನಿಖೆ ನಡೆಸುವಂತೆ ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಮಧ್ಯಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಯಾ ಠಾಕೂರ್ ವಕೀಲ ವರೀಂದರ್ ಕುಮಾರ್ ಶರ್ಮಾ ಮೂಲಕ ತಮ್ಮ ಮನವಿ ಸಲ್ಲಿಸಿದ್ದಾರೆ. ಸಾರ್ವಜನಿಕರು ಮತ್ತು ಸರ್ಕಾರದ ಬೊಕ್ಕಸಕ್ಕೆ ಕೋಟಿಗಟ್ಟಲೆ ಹಣವನ್ನು ಲಪಟಾಯಿಸಿರುವ ಅದಾನಿ ಸಮೂಹ ಸಂಸ್ಥೆಗಳು ಮತ್ತು ಅದರ ಸಹಚರರ ವಿರುದ್ಧ ತನಿಖೆ ನಡೆಸಬೇಕೆಂದು ಅರ್ಜಿದಾರರು ಒತ್ತಾಯಿಸಿದ್ದಾರೆ.
ಸುಪ್ರೀಂ ಕೋರ್ಟ್ ನ ಹಾಲಿ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ, ಇಡಿ, ಕಂದಾಯ ಗುಪ್ತಚರ ನಿರ್ದೇಶನಾಲಯ, ನೇರ ತೆರಿಗೆಗಳ ಕೇಂದ್ರೀಯ ಮಂಡಳಿ, ಇಐಬಿ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ, ಸೆಬಿ ಮತ್ತಿತರ ಕೇಂದ್ರೀಯ ತನಿಖಾ ಸಂಸ್ಥೆಗಳಿಂದ ತನಿಖೆಗೆ ಕೋರಿದ್ದಾರೆ.
ಅದಾನಿ ಎಂಟರ್ಪ್ರೈಸಸ್ ಭಾರಿ ಮೊತ್ತದ ಸಾರ್ವಜನಿಕ ಹಣವನ್ನು ಹೂಡಿಕೆ ಮಾಡುವಲ್ಲಿ ಭಾರತೀಯ ಜೀವ ವಿಮಾ ನಿಗಮ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪಾತ್ರ ಕುರಿತು ತನಿಖೆ ಮಾಡಲು ತನಿಖಾ ಸಂಸ್ಥೆಗಳಿಗೆ ನಿರ್ದೇಶಿಸುವಂತೆ ಅವರು ಉನ್ನತ ನ್ಯಾಯಾಲಯದಲ್ಲಿ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


