ದೆಹಲಿ: ಎಂಸಿಡಿ ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ವೇಳೆ ಮಾರಾಮಾರಿ, ಬಿಜೆಪಿಯಿಂದ ದಾಳಿ, ಮೇಯರ್ ಆರೋಪ- ವಿಡಿಯೋ
ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಸದನದಲ್ಲಿ ಬುಧವಾರ ಸ್ಥಾಯಿ ಸಮಿತಿಯ ಸದಸ್ಯರ ಚುನಾವಣೆಯ ಸಂದರ್ಭದಲ್ಲಿ ಮಾರಾಮಾರಿ ನಡೆದಿದೆ. ಬಿಜೆಪಿ ಕೌನ್ಸಿಲರ್ ಗಳ ಸದನದಲ್ಲಿ ತಮ್ಮ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ನೂತನ ಮೇಯರ್ ಶೆಲ್ಲಿ ಒಬೆರಾಯ್ ಆರೋಪಿಸಿದ್ದಾರೆ.

ನವದೆಹಲಿ: ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಸದನದಲ್ಲಿ ಬುಧವಾರ ಸ್ಥಾಯಿ ಸಮಿತಿಯ ಸದಸ್ಯರ ಚುನಾವಣೆಯ ಸಂದರ್ಭದಲ್ಲಿ ಮಾರಾಮಾರಿ ನಡೆದಿದೆ. ಬಿಜೆಪಿ ಕೌನ್ಸಿಲರ್ ಗಳ ಸದನದಲ್ಲಿ ತಮ್ಮ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ನೂತನ ಮೇಯರ್ ಶೆಲ್ಲಿ ಒಬೆರಾಯ್ ಆರೋಪಿಸಿದ್ದಾರೆ. ಸ್ಥಾಯಿ ಸಮಿತಿ ಚುನಾವಣೆ ನಡೆಸುತ್ತಿದ್ದ ವೇಳೆ ತಮ್ಮ ಮೇಲೆ ಬಾಟಲಿಗಳನ್ನು ಎಸೆಯಲಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ದೆಹಲಿ ಎಂಸಿಡಿ ಮೇಯರ್ ಚುನಾವಣೆ: ಎಎಪಿ ಅಭ್ಯರ್ಥಿ ಶೆಲ್ಲಿ ಒಬೆರಾಯ್ ಗೆ 150 ಮತಗಳಿಂದ ಗೆಲುವು; ಬಿಜೆಪಿಗೆ ಮುಖಭಂಗ
ಸುಪ್ರೀಂ ಕೋರ್ಟ್ ಆದೇಶದಂತೆ ಸ್ಥಾಯಿ ಸಮಿತಿ ಚುನಾವಣೆ ನಡೆಸುತ್ತಿದ್ದಾಗ ಬಿಜೆಪಿ ಕೌನ್ಸಿಲರ್ಗಳು ನನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ! ಇದು ಬಿಜೆಪಿಯ ಗುಂಡಾಗಿರಿಯಾಗಿದ್ದು, ಮಹಿಳಾ ಮೇಯರ್ ಮೇಲೆ ಅವರು ದಾಳಿ ನಡೆಸಲು ಪ್ರಯತ್ನಿಸಿದ್ದಾರೆ ಎಂದು ಒಬೆರಾಯ್ ಟ್ವೀಟ್ ಮಾಡಿದ್ದಾರೆ.
ಮತಗಟ್ಟೆಗಳ ಒಳಗೆ ಮೊಬೈಲ್ ಫೋನ್ಗಳನ್ನು ಬಳಸಿ ಫೋಟೋ ತೆಗೆಯುವುದರ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತು. ಸದನದ ಕಲಾಪಗಳ ಸಮಯದಲ್ಲಿ, ಬಿಜೆಪಿ ಕಾರ್ಪೊರೇಟರ್ ಶಿಖಾ ರೈ ಅವರು ಮೇಯರ್ ಬಳಿಗೆ ತೆರಳಿ ಮೈಕ್ ಕಸಿದುಕೊಳ್ಳಲು ಪ್ರಯತ್ನಿಸಿದರು ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್, ಈ ಘಟನೆ ಆತಂಕಕಾರಿಯಾಗಿದ್ದು,ಸ್ವೀಕರಿಸಲಾಗದು ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


