ಕಾಂಜಾವಾಲಾ ಅಪಘಾತ ಪ್ರಕರಣ: 6ನೇ ಆರೋಪಿ ಕಾರಿನ ಮಾಲೀಕ ಬಂಧನ
ದೆಹಲಿಯ ಕಾಂಜಾವಾಲಾ ಮಹಿಳೆ ಸಾವು ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿದ್ದ ದೆಹಲಿ ಪೊಲೀಸರು ಪ್ರಕರಣದ 6ನೇ ಆರೋಪಿಯನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ನವದೆಹಲಿ: ದೆಹಲಿಯ ಕಾಂಜಾವಾಲಾ ಮಹಿಳೆ ಸಾವು ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿದ್ದ ದೆಹಲಿ ಪೊಲೀಸರು ಪ್ರಕರಣದ 6ನೇ ಆರೋಪಿಯನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.
ಕಾರಿನ ಮಾಲೀಕನಾಗಿರುವ ಆಶುತೋಷ್ ಎಂಬಾತನನ್ನು ದೆಹಲಿ ಪೊಲೀಸರು ಇಂದು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ನಿನ್ನೆಯಷ್ಟೇ ಪ್ರಕರಣ ಸಂಬಂಧ ಹೇಳಿಕೆ ನೀಡಿದ್ದ ದೆಹಲಿ ಪೊಲೀಸರು, ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳು ಭಾಗಿಯಾಗಿದ್ದಾರೆಂದು ಹೇಳಿದ್ದರು.
ಕಾರಿನ ಮಾಲೀಕ ಅಶುತೋಷ್ ಮತ್ತು ಆರೋಪಿಗಳಲ್ಲಿ ಒಬ್ಬನ ಸಹೋದರನಾಗಿರುವ ಅಂಕುಶ್ ಎಂಬುವವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ತಿಳಿಸಿದ್ದರು.
"ಬಂಧಿತ ಐವರನ್ನು ಹೊರತುಪಡಿಸಿ ಇನ್ನೂ ಇಬ್ಬರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ನಮ್ಮ ಬಳಿ ಈ ಬಗ್ಗೆ ಸಾಕ್ಷ್ಯಾಧಾರಗಳಿವೆ. ಅಪರಾಧವೊಂದನ್ನು ಎಸಗಿ ಅದನ್ನು ಮುಚ್ಚಿಡುವ ಪ್ರಯತ್ನ ಮಾಡಿದ್ದಾರೆ. ಬಂಧನದಲ್ಲಿರುವ ಆರೋಪಿಗಳನ್ನೂ ರಕ್ಷಿಸಲು ಪ್ರಯತ್ನ ನಡೆಸುತ್ತಿದ್ದಾರೆಂದು ಹಿರಿಯ ಪೊಲೀಸ್ ಅಧಿಕಾರಿ ಸಾಗರ್ಪ್ರೀತ್ ಹೂಡಾ ಅವರು ಹೇಳಿದ್ದರು. ಇದರಂತೆ ಇದೀಗ ಓರ್ವ ಆರೋಪಿ ಆಶುತೋಷ್ ನನ್ನು ಬಂಧನಕ್ಕೊಳಪಡಿಸಿದ್ದಾರೆ.
ದೆಹಲಿಯ ಹೊರಭಾಗದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಹಲವು ಕಿಲೋಮೀಟರ್ಗಳವರೆಗೆ ಮಹಿಳೆಯ ದೇಹ ಎಳೆದೊಯ್ದು ಹತ್ಯೆಗೀಡಾದ 20ರ ಹರೆಯದ ಮಹಿಳೆಯ ಪ್ರಕರಣ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


