ಜನವರಿ ಅಂತ್ಯಕ್ಕೆ ಹೊಸ ಸಂಸತ್ ಭವನ ಸಿದ್ಧ
ಹೊಸ ಸಂಸತ್ ಭವನ ಜನವರಿ ಮಾಸಾಂತ್ಯದ ವೇಳೆಗೆ ಸಿದ್ಧಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಇಂಟೀರಿಯರ್ಸ್ ಗೆ ಅಂತಿಮ ಹಂತದ ಕಾಮಗಾರಿಗಳು ನಡೆಯುತ್ತಿದ್ದು, ವೇಗವಾಗಿ ಸಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ನವದೆಹಲಿ: ಹೊಸ ಸಂಸತ್ ಭವನ ಜನವರಿ ಮಾಸಾಂತ್ಯದ ವೇಳೆಗೆ ಸಿದ್ಧಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಇಂಟೀರಿಯರ್ಸ್ ಗೆ ಅಂತಿಮ ಹಂತದ ಕಾಮಗಾರಿಗಳು ನಡೆಯುತ್ತಿದ್ದು, ವೇಗವಾಗಿ ಸಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಸಂಸತ್ ನ ಬಜೆಟ್ ಅಧಿವೇಶವನ್ನು ಹೊಸ ಸಂಸತ್ ಭವನದಲ್ಲಿ ನಡೆಸುವುದೋ ಅಥವಾ ಈಗಿನ ಹಳೆಯ ಕಟ್ಟಡದಲ್ಲೋ ಎಂಬ ನಿರ್ಧಾರ ಇನ್ನಷ್ಟೇ ಕೈಗೊಳ್ಳಬೇಕಿದೆ.
ಹೊಸ ಸಂಸತ್ ಭವನ ಸೆಂಟ್ರಲ್ ವಿಸ್ಟಾದ ಮರು ನಿರ್ಮಾಣದ ಭಾಗವಾಗಿದೆ. 2 ವರ್ಷಗಳ ಹಿಂದೆ ಸೆಂಟ್ರಲ್ ವಿಸ್ಟಾ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿತ್ತು. ದೇಶದ ಶಕ್ತಿಕೇಂದ್ರ ಸೆಂಟ್ರಲ್ ವಿಸ್ಟಾದ ಭಾಗವಾಗಿ ಹೊಸ ಸಂಸತ್ ನ್ನು ನಿರ್ಮಿಸಲಾಗುತ್ತಿದೆ. ಹೊಸ ಸಂಸತ್ ಭವನಕ್ಕೆ 2020 ರ ಡಿಸೆಂಬರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದರು.
ಹೊಸ ಸಂಸತ್ ಭವನವನ್ನು ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ನಿರ್ಮಿಸುತ್ತಿದ್ದು, ಭಾರತದ ಪ್ರಜಾಪ್ರಭುತ್ವದ ಪರಂಪರೆಯನ್ನು ಪ್ರದರ್ಶಿಸುವ ಭವ್ಯ ಸಂವಿಧಾನ ಹಾಲ್, ಗ್ರಂಥಾಲಯ, ಹಲವು ಸಮಿತಿಗಳ ಕೊಠಡಿಗಳು ಇರಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


