ದೇಶ

ಭಾರತ್ ಜೋಡೋ ಯಾತ್ರೆ ಪಂಜಾಬ್ ಪ್ರವೇಶಿಸುತ್ತಿದ್ದಂತೆ ಗೋಲ್ಡನ್ ಟೆಂಪಲ್‌ಗೆ ರಾಹುಲ್ ಗಾಂಧಿ ಭೇಟಿ

ಭಾರತ್ ಜೋಡೋ ಯಾತ್ರೆ ಪಂಜಾಬ್ ಪ್ರವೇಶಿಸುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಅಮೃತಸರದ ಶ್ರೀ ಹರ್ಮಂದಿರ್ ಸಾಹಿಬ್(ಗೋಲ್ಡನ್ ಟೆಂಪಲ್)ಗೆ ಭೇಟಿ ನೀಡಿದರು.

ಭಾರತ್ ಜೋಡೋ ಯಾತ್ರೆ ಪಂಜಾಬ್ ಪ್ರವೇಶಿಸುತ್ತಿದ್ದಂತೆ ಗೋಲ್ಡನ್ ಟೆಂಪಲ್‌ಗೆ ರಾಹುಲ್ ಗಾಂಧಿ ಭೇಟಿ
ರಾಹುಲ್ ಗಾಂಧಿ
Published On :

ಅಮೃತಸರ: ಭಾರತ್ ಜೋಡೋ ಯಾತ್ರೆ ಪಂಜಾಬ್ ಪ್ರವೇಶಿಸುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಅಮೃತಸರದ ಶ್ರೀ ಹರ್ಮಂದಿರ್ ಸಾಹಿಬ್(ಗೋಲ್ಡನ್ ಟೆಂಪಲ್)ಗೆ ಭೇಟಿ ನೀಡಿದರು.

ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ಬೆಳಗ್ಗೆ ಹರಿಯಾಣದ ಅಂಬಾಲಾದಲ್ಲಿ ದಟ್ಟವಾದ ಮಂಜು ಮತ್ತು ಕೊರೆಯುವ ಚಳಿಯ ನಡುವೆ ಭಾರತ್ ಜೋಡೋ ಯಾತ್ರೆಯನ್ನು ಪುನರಾರಂಭಿಸಿದರು. ಮಧ್ಯಾಹ್ನ ಪಂಜಾಬ್ ಪ್ರವೇಶಿಸುತ್ತಿದ್ದಂತೆ ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿದರು.

ಸೋಮವಾರ, ಭಾರತ್ ಜೋಡೋ ಯಾತ್ರೆಯನ್ನು ಮಹಿಳೆಯರು ಮತ್ತು ಮಹಿಳಾ ಸಬಲೀಕರಣಕ್ಕಾಗಿ ಸಮರ್ಪಿಸಲಾಗಿತ್ತು.

ಪಂಜಾಬ್ ನಂತರ, ಭಾರತ್ ಜೋಡೋ ಯಾತ್ರೆಯು ಹಿಮಾಚಲ ಪ್ರದೇಶದಲ್ಲಿ ಸ್ವಲ್ಪ ಸಮಯ ಸಾಗಿ ಜನವರಿ 20 ರಂದು ಜಮ್ಮು ಮತ್ತು ಕಾಶ್ಮೀರವನ್ನು ಪ್ರವೇಶಿಸಲಿದೆ.

ಜನವರಿ 30 ರಂದು ಶ್ರೀನಗರದಲ್ಲಿ ತ್ರಿವರ್ಣ ಧ್ವಜಾರೋಹಣದೊಂದಿಗೆ ಯಾತ್ರೆ ಕೊನೆಗೊಳ್ಳಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.