ಮುಳುಗುತ್ತಿದೆ ಜೋಶಿಮಠ: ತುರ್ತು ಅರ್ಜಿ ಪರಿಶೀಲನೆಗೆ ಸುಪ್ರೀಂಕೋರ್ಟ್ ನಕಾರ
ಇತಿಹಾಸ ಪ್ರಸಿದ್ಧ ಉತ್ತರಾಖಂಡ್ನ ಜೋಶಿಮಠ ಅಳವಿನಂಚಿಗೆ ತಲುಪುತ್ತಿದ್ದು, ಈ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತುರ್ತು ಪರಿಶೀಲನೆ ನಡೆಸಲು ಸುಪ್ರೀಕೋರ್ಟ್ ಮಂಗಳವಾರ ನಿರಾಕರಿಸಿದೆ.

ನವದೆಹಲಿ: ಇತಿಹಾಸ ಪ್ರಸಿದ್ಧ ಉತ್ತರಾಖಂಡ್ನ ಜೋಶಿಮಠ ಅಳವಿನಂಚಿಗೆ ತಲುಪುತ್ತಿದ್ದು, ಈ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತುರ್ತು ಪರಿಶೀಲನೆ ನಡೆಸಲು ಸುಪ್ರೀಕೋರ್ಟ್ ಮಂಗಳವಾರ ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಪಿಎಸ್ ನರಸಿಂಹ ಅವರಿದ್ದ ಪೀಠವು, ಈ ಸಮಸ್ಯೆಯನ್ನು ಪರಿಶೀಲಿಸಲು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸಂಸ್ಥೆಗಳಿವೆ ಎಂದು ಹೇಳಿದ್ದು, ಜನವರಿ 16ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಮುಖ್ಯವಾದ ಎಲ್ಲವೂ ಸುಪ್ರೀಂಕೋರ್ಟ್ ಅಂಗಳಕ್ಕೆ ಬರಬೇಕಾಗಿಲ್ಲ. ಈ ಸಮಸ್ಯೆಯನ್ನು ನಿರ್ವಹಿಸಲು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸಂಸ್ಥೆಗಳಿವೆ ಎಂದು ಪೀಠ ಹೇಳಿದೆ.
ಈ ಹಿಂದೆ ಆದೇಶ ನೀಡಿದ್ದ ಸುಪ್ರೀಂಕೋರ್ಟ್, ಜೋಶಿಮಠದಲ್ಲಿ ಉದ್ಭವಿಸಿರುವ ಆಪತ್ತನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ನ್ಯಾಯಾಲಯದ ಮಧ್ಯಪ್ರವೇಶ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮಂಗಳವಾರವೇ ತುರ್ತು ವಿಚಾರಣೆಗೆ ಪಟ್ಟಿ ಮಾಡುವಂತೆ ನಮೂದಿಸಲು ಅರ್ಜಿದಾರರಿಗೆ ಸೂಚಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


