ಟಿಎಂಸಿ ಕಾರ್ಯಕರ್ತರು ದಾಳಿ ಮಾಡಿದರೆ ಮರಕ್ಕೆ ಕಟ್ಟಿ ಹಾಕಿ ಪ್ರತಿದಾಳಿ ಮಾಡಿ: ಬಿಜೆಪಿ ಸಂಸದೆ
ಟಿಎಂಸಿ ಕಾರ್ಯಕರ್ತರ ದಾಳಿಗೆ ಪ್ರತೀಕಾರ ತೀರಿಸುವಂತೆ ಬಿಜೆಪಿ ಸಂಸದ ಲಾಕೆಟ್ ಚಟರ್ಜಿ ಜನರಿಗೆ ಹೇಳಿದ್ದು ಈ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ತೀವ್ರ ವಿವಾದ ಸೃಷ್ಟಿಸಿದೆ.

ಕೋಲ್ಕತ್ತಾ: ಟಿಎಂಸಿ ಕಾರ್ಯಕರ್ತರ ದಾಳಿಗೆ ಪ್ರತೀಕಾರ ತೀರಿಸುವಂತೆ ಬಿಜೆಪಿ ಸಂಸದ ಲಾಕೆಟ್ ಚಟರ್ಜಿ ಜನರಿಗೆ ಹೇಳಿದ್ದು ಈ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ತೀವ್ರ ವಿವಾದ ಸೃಷ್ಟಿಸಿದೆ.
'ರಾಜ್ಯದಲ್ಲಿ ಪಂಚಾಯ್ತಿ ಚುನಾವಣೆಗೆ ಮುನ್ನ ಆಡಳಿತ ಪಕ್ಷ ಆರಂಭಿಸಿರುವ ಜನಸಂಪರ್ಕ ಅಭಿಯಾನದ ವೇಳೆ ಕಷ್ಟವನ್ನು ಹೇಳಿಕೊಳ್ಳಲು ಬಂದಾಗ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವ್ಯಕ್ತಿಯೊಬ್ಬರು ದೂರಿದ ಈ ಹಿನ್ನೆಲೆಯಲ್ಲಿ ಜನರಿಗೆ ಪ್ರತಿದಾಳಿ ನಡೆಸುವಂತೆ ಎಂದು ಬಿಜೆಪಿ ನಾಯಕಿ ಹೇಳಿದ್ದಾರೆ.
ಉತ್ತರ 24 ಪರಗಣ ಜಿಲ್ಲೆಯ ದತ್ತಪುಕುರ್ ಪ್ರದೇಶದಲ್ಲಿ ಶನಿವಾರ ನಡೆದ ತೃಣಮೂಲ ಕಾಂಗ್ರೆಸ್‌ನ 'ದೀದಿ ಕಾ ಸುರಕ್ಷಾ ಕವಚ' ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕನಿಗೆ ಕಪಾಳಮೋಕ್ಷ ಮಾಡಿದ ಸಂದರ್ಭದಲ್ಲಿ ಹೂಗ್ಲಿ ಸಂಸದರು ಈ ಹೇಳಿಕೆ ನೀಡಿದ್ದಾರೆ. 'ಒಬ್ಬ ಟಿಎಂಸಿ ಕಾರ್ಯಕರ್ತ ನಿಮಗೆ (ಆಮ್ ಆದ್ಮಿ) ಕಪಾಳಮೋಕ್ಷ ಮಾಡಿದರೆ, ಅವನು ನಿಮ್ಮ ಕುಂದುಕೊರತೆಗಳನ್ನು ಕೇಳಲು ಬಯಸದಿದ್ದರೆ, ಅವನನ್ನು ಮರಕ್ಕೆ ಕಟ್ಟಿ ನಾಲ್ಕೈದು ಬಾರಿ ಹೊಡೆಯಿರಿ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಪಂಚಾಯತ್ ಚುನಾವಣೆಗೂ ಮೊದಲು, ಟಿಎಂಸಿ ಜನಸಂಪರ್ಕ ಅಭಿಯಾನವನ್ನು ಪ್ರಾರಂಭಿಸಿದೆ. ಈ ಅಭಿಯಾನದ ಹೆಸರನ್ನು 'ದೀದಿ ಕಾ ಸುರಕ್ಷಾ ಕವಚ' ಎಂದು ಇಡಲಾಗಿದೆ. ರಾಜ್ಯ ಸರ್ಕಾರದ ಕಲ್ಯಾಣ ಯೋಜನೆಗಳ ಸದುಪಯೋಗವನ್ನು ಎಲ್ಲ ಜನರು ಪಡೆಯಬೇಕು ಎಂಬುದು ಅಭಿಯಾನದ ಉದ್ದೇಶವಾಗಿದೆ. ಮೊದಲ ಹಂತದ ಪ್ರಚಾರ ಬುಧವಾರದಿಂದ ಆರಂಭಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


