ದೇಶ

ಇಂದು ದೆಹಲಿಯಲ್ಲಿ ಪ್ರಧಾನಿ ರೋಡ್ ಶೋ: ಪ್ರಮುಖ ರಸ್ತೆಗಳಲ್ಲಿ ರಾರಾಜಿಸುತ್ತಿದೆ ಮೋದಿ ಕಟೌಟ್-ಹೋರ್ಡಿಂಗ್ಸ್ ಗಳು

ಭಾರತೀಯ ಜನತಾ ಪಕ್ಷದ ವತಿಯಿಂದ ಇಂದು ಸೋಮವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ರೋಡ್ ಶೋ ಆಯೋಜಿಸಿದೆ.

ಇಂದು ದೆಹಲಿಯಲ್ಲಿ ಪ್ರಧಾನಿ ರೋಡ್ ಶೋ: ಪ್ರಮುಖ ರಸ್ತೆಗಳಲ್ಲಿ ರಾರಾಜಿಸುತ್ತಿದೆ ಮೋದಿ ಕಟೌಟ್-ಹೋರ್ಡಿಂಗ್ಸ್ ಗಳು
ಕಟೌಟ್, ಹೋರ್ಡಿಂಗ್ಸ್ ಗಳು
Published On :

ನವದೆಹಲಿ: ಭಾರತೀಯ ಜನತಾ ಪಕ್ಷದ ವತಿಯಿಂದ ಇಂದು ಸೋಮವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ರೋಡ್ ಶೋ ಆಯೋಜಿಸಿದೆ.

ಇಂದು ಮತ್ತು ನಾಳೆ  ದೆಹಲಿಯಲ್ಲಿ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ಎನ್‌ಡಿಎಂಸಿ ಕನ್ವೆನ್ಷನ್ ಸೆಂಟರ್‌ನಲ್ಲಿ ಆರಂಭಗೊಂಡಿದೆ. ಈ ರಾಷ್ಟ್ರೀಯ ಕಾರ್ಯಕಾರಿಣಿಯ ಭಾಗವಾಗಿ ಇಂದು ಪ್ರಧಾನಿ ಮೋದಿ ರೋಡ್ ಶೋ ನಡೆಯಲಿದ್ದು ಅದರ ಅಂಗವಾಗಿ ಹೋರ್ಡಿಂಗ್ಸ್ ಮತ್ತು ಕಟೌಟ್ ಗಳು ಬೀದಿಗಳಲ್ಲಿ ರಾರಾಜಿಸುತ್ತಿವೆ.

ಮೂಲಗಳ ಪ್ರಕಾರ, ಪ್ರಧಾನಿ ಮೋದಿಯವರು ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯುವ ಸ್ಥಳದವರೆಗೆ ಸುಮಾರು ಒಂದು ಕಿಲೋಮೀಟರ್‌ ರೋಡ್‌ ಶೋ ನಡೆಸಲಿದ್ದಾರೆ. ಈ ರೋಡ್ ಶೋ ವೇಳೆ ವಿವಿಧ ರಾಜ್ಯಗಳ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಲಿದ್ದಾರೆ. ಪಕ್ಷದ ಕಾರ್ಯಕರ್ತರು ರಸ್ತೆಯುದ್ದಕ್ಕೂ ನಿಂತು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲಿದ್ದಾರೆ.

ಇಂದು ಬೆಳಗ್ಗೆ ಪಟೇಲ್ ಚೌಕ್ ಮತ್ತು ಸಂಸದ ಮಾರ್ಗದಲ್ಲಿ ಕಂಡುಬಂದದ್ದು ಹೀಗೆ. 

ಬಿಜೆಪಿಯ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭವಾಗಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಅಧಿಕಾರಾವಧಿ ವಿಸ್ತರಣೆಯನ್ನು ಅನುಮೋದಿಸುವ ಸಾಧ್ಯತೆಯಿದೆ. ಮುಂಬರುವ ವಿಧಾನಸಭೆ ಮತ್ತು ಸಾರ್ವತ್ರಿಕ ಚುನಾವಣೆಗಳಿಗೆ ಅದರ ಕಾರ್ಯತಂತ್ರದ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.

ರಾಷ್ಟ್ರೀಯ ಅಧ್ಯಕ್ಷರಾಗಿ ನಡ್ಡಾ ಅವರ ಮೂರು ವರ್ಷಗಳ ಅವಧಿ ಇದೇ ತಿಂಗಳಿಗೆ ಕೊನೆಗೊಳ್ಳಲಿದೆ. 2024ರ ಲೋಕಸಭೆ ಚುನಾವಣೆ ಮುಗಿಯುವವರೆಗೆ ಅವರು ಪಕ್ಷವನ್ನು ಮುನ್ನಡೆಸುವ ಸಾಧ್ಯತೆ ಇದೆ. ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭಕ್ಕೂ ಮುನ್ನ ಪಕ್ಷದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ಪಟೇಲ್ ಚೌಕ್‌ನಿಂದ ಎನ್‌ಡಿಎಂಸಿ ಸಮಾವೇಶ ಕೇಂದ್ರದವರೆಗೆ ರೋಡ್ ಶೋ ಆಯೋಜಿಸಲಾಗಿದೆ.

ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ, ದೇಶ ಎದುರಿಸುತ್ತಿರುವ ಹಲವಾರು ಪ್ರಮುಖ ಸಮಸ್ಯೆಗಳನ್ನು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು. ರಾಜಕೀಯ ಮತ್ತು ಆರ್ಥಿಕ ನಿರ್ಣಯಗಳ ಕುರಿತು ಚರ್ಚೆ ನಡೆಯಲಿದೆ ಎಂದರು..

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.