35 ಪ್ರಯಾಣಿಕರನ್ನು ನಿಲ್ದಾಣದಲ್ಲಿಯೇ ಬಿಟ್ಟು ಹಾರಿದ ವಿಮಾನ: ಡಿಜಿಸಿಎಯಿಂದ ತನಿಖೆಗೆ ಆದೇಶ
ಇತ್ತೀಚಿನ ದಿನಗಳಲ್ಲಿ ವಿಮಾನಯಾನ ಅವಾಂತಗಳು ಹೆಚ್ಚಾಗುತ್ತಿದ್ದು, ಇದೀಗ ವಿಮಾನವೊಂದು ಬರೊಬ್ಬರಿ 35 ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಬಿಟ್ಟು ಹೋಗಿರುವ ಘಟನೆ ಅಮೃತಸರದಲ್ಲಿ ವರದಿಯಾಗಿದೆ.

ನವದೆಹಲಿ: ಇತ್ತೀಚಿನ ದಿನಗಳಲ್ಲಿ ವಿಮಾನಯಾನ ಅವಾಂತಗಳು ಹೆಚ್ಚಾಗುತ್ತಿದ್ದು, ಇದೀಗ ವಿಮಾನವೊಂದು ಬರೊಬ್ಬರಿ 35 ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಬಿಟ್ಟು ಹೋಗಿರುವ ಘಟನೆ ಅಮೃತಸರದಲ್ಲಿ ವರದಿಯಾಗಿದೆ.
ಅಮೃತಸರ–ಸಿಂಗಪುರ ಮಾರ್ಗದ ಸ್ಕೂಟ್ ಏರ್‌ಲೈನ್ಸ್ ವಿಮಾನವು ಬುಧವಾರ 35 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಆಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅಮೃತಸರದಿಂದ ಸಿಂಗಪುರ ಮಾರ್ಗದ ಸ್ಕೂಟ್ ಏರ್‌ಲೈನ್ಸ್ ವಿಮಾನವು ಬುಧವಾರ 35 ಪ್ರಯಾಣಿಕರನ್ನು ಬಿಟ್ಟು ಹೊರಟಿದೆ ಎಂದು ವರದಿಯಾಗಿದೆ. ಅಮೃತಸರ ವಿಮಾನ ನಿಲ್ದಾಣದಿಂದ ವಿಮಾನವು ಬುಧವಾರ ರಾತ್ರಿ 7.55 ಕ್ಕೆ ಹೊರಡಬೇಕಿತ್ತು, ಆದರೆ 35 ಪ್ರಯಾಣಿಕರನ್ನು ಬಿಟ್ಟು 3 ಗಂಟೆಗೆ ಟೇಕ್ ಆಫ್ ಆಗಿತ್ತು. ಘಟನೆಗೆ ಕಾರಣ ತಿಳಿದುಬಂದಿಲ್ಲ.
ಏನಿದು ಗೊಂದಲ?
ಸಿಂಗಾಪುರ ವಿಮಾನವನ್ನು ತಪ್ಪಿಸಿಕೊಂಡ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಗದ್ದಲ ಉಂಟು ಮಾಡಿದರು ಹಾಗೂ ಪ್ರತಿಭಟನೆಯನ್ನು ನಡೆಸಿದರು. ಅವರು ವಿಮಾನ ನಿಲ್ದಾಣದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ತಮ್ಮ ದೂರನ್ನು ದಾಖಲಿಸಿದ್ದಾರೆ. ವಿಮಾನ ನಿಲ್ದಾಣದ ಅಧಿಕಾರಿಗಳು ವಿಮಾನಯಾನ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಪ್ರಯಾಣಿಕರಿಗೆ ಇ-ಮೇಲ್ ಮೂಲಕ ಹಾರಾಟದ ಸಮಯದಲ್ಲಿ ಬದಲಾವಣೆಯ ಬಗ್ಗೆ ತಿಳಿಸಲಾಗಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.
ದೂರು ದಾಖಲು, ಡಿಜಿಸಿಎ ತನಿಖೆ
ಇನ್ನು ಘಟನೆಯಿಂದ ಕೆರಳಿದ ಪ್ರಯಾಣಿಕರು ಅಮೃತಸರ ವಿಮಾನ ನಿಲ್ದಾಣದಲ್ಲಿಯೇ ಪ್ರತಿಭಟನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ದಾಖಲಿಸಿದ್ದಾರೆ. ಅಂತೆಯೇ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಈ ವೈಫಲ್ಯದ ಬಗ್ಗೆ ತನಿಖೆಗೆ ಆದೇಶಿಸಿದೆ.
ಇದನ್ನೂ ಓದಿ: ಇಂಡಿಗೋ ವಿಮಾನ ಟೇಕಾಫ್ ವೇಳೆ 'ಎಮರ್ಜೆನ್ಸಿ ಡೋರ್' ತೆಗೆದ ಸಂಸದ ತೇಜಸ್ವಿ ಸೂರ್ಯ?, ತನಿಖೆಗೆ ಡಿಜಿಸಿಎ ಆದೇಶ
"ಸುಮಾರು 280 ಪ್ರಯಾಣಿಕರು ಸಿಂಗಾಪುರಕ್ಕೆ ಪ್ರಯಾಣಿಸಬೇಕಾಗಿತ್ತು. ಆದರೆ 253 ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸಿದ್ದು, ಇದರಿಂದಾಗಿ 30 ಕ್ಕೂ ಹೆಚ್ಚು ಪ್ರಯಾಣಿಕರು ಉಳಿದಿದ್ದಾರೆ" ಎಂದು ಅಮೃತಸರ ವಿಮಾನ ನಿಲ್ದಾಣದ ನಿರ್ದೇಶಕರು ತಿಳಿಸಿದ್ದಾರೆ. ಒಂದು ಗುಂಪಿನಲ್ಲಿ 30 ಜನರಿಗೆ ಟಿಕೆಟ್‌ಗಳನ್ನು ಕಾಯ್ದಿರಿಸಿದ ಟ್ರಾವೆಲ್ ಏಜೆಂಟ್, ವಿಮಾನದ ಸಮಯದಲ್ಲಿ ಬದಲಾವಣೆಯ ಬಗ್ಗೆ ಅವರಿಗೆ (ಪ್ರಯಾಣಿಕರಿಗೆ) ತಿಳಿಸಲಿಲ್ಲ, ಇದರಿಂದಾಗಿ ಸಮಯಕ್ಕೆ ಸರಿಯಾಗಿ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರೊಂದಿಗೆ ವಿಮಾನವು ಹಾರಾಟ ನಡೆಸಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಹಿಂದೆ ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ಗೋ ಫಸ್ಟ್ ವಿಮಾನವು 55 ಪ್ರಯಾಣಿಕರನ್ನು ಬಿಟ್ಟು ಹಾರಿದ್ದು ಇತ್ತೀಚೆಗೆ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಅದರ ಬೆನ್ನಲ್ಲೇ ಈಗ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


