ಒಡಿಶಾ ಆರೋಗ್ಯ ಸಚಿವರನ್ನು ಗುಂಡಿಕ್ಕಿ ಕೊಂದ ಪೊಲೀಸ್ ಅಧಿಕಾರಿ ಸೇವೆಯಿಂದ ವಜಾ
ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಅವರನ್ನು ಭಾನುವಾರ ಗುಂಡಿಕ್ಕಿ ಕೊಂದ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗೋಪಾಲ್ ಕೃಷ್ಣ ದಾಸ್ ಅವರನ್ನು ಸೋಮವಾರ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ...

ಭುವನೇಶ್ವರ: ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಅವರನ್ನು ಭಾನುವಾರ ಗುಂಡಿಕ್ಕಿ ಕೊಂದ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗೋಪಾಲ್ ಕೃಷ್ಣ ದಾಸ್ ಅವರನ್ನು ಸೋಮವಾರ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಜೈನ್ ತಿಳಿಸಿದ್ದಾರೆ.
ಆರೋಪಿ ಇದೀಗ ಪೊಲೀಸ್ ಕಸ್ಟಡಿಯಲ್ಲಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ವಶಕ್ಕೆ ಪಡೆಯಲಾಗುವುದು ಎಂದು ಅಪರಾಧ ವಿಭಾಗದ ಅಧಿಕಾರಿಗಳು ಹೇಳಿದ್ದಾರೆ.
ಪ್ರಕರಣದ ತನಿಖೆ ಮುಂದುವರೆದಿದ್ದು, ರಾಜ್ಯ ಅಪರಾಧ ವಿಭಾಗದ ತಂಡ ಆರೋಪಿ ಬಳಿ ಇದ್ದ 9 ಎಂಎಂ ಪಿಸ್ತೂಲ್ ಮತ್ತು 3 ಸುತ್ತಿನ ಜೀವಂತ ಗುಂಡುಗಳು, ಅವರ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದೆ.
ನಿನ್ನೆ ಝಾರಸುಗುಡ ಜಿಲ್ಲೆಯ ಬ್ರಜರಾಜನಗರದ ಗಾಂಧಿ ಚೌನ್ ನಲ್ಲಿ ಗೋಪಾಲ್ ಕೃಷ್ಣ ದಾಸ್ ಸಚಿವರ ಮೇಲೆ ಗುಂಡು ಹಾರಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಸಚಿವ ನಬಾ ದಾಸ್ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬಂಧಿತ ಪೊಲೀಸ್ ಅಧಿಕಾರಿ ಸಚಿವರ ಮೇಲೆ ಗುಂಡು ಹಾರಿಸಿದ್ದು ಏಕೆ ಎಂಬುದು ಇನ್ನೂ ತಿಳಿದು ಬಂದಿಲ್ಲ. ಆದರೆ ಗೋಪಾಲ್ ಕೃಷ್ಣ ದಾಸ್ ಅವರ ಪತ್ನಿ, ತಮ್ಮ ಪತಿಯ ಮಾನಸಿಕ ಆರೋಗ್ಯ ಸರಿ ಇರಲಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


