ನನ್ನನ್ನು ವಜಾ ಮಾಡುವ ಅಧಿಕಾರ ಅಜಿತ್ ಪವಾರ್ ಬಣಕ್ಕೆ ಇಲ್ಲ: ಜಯಂತ್ ಪಾಟೀಲ್
ನನ್ನನ್ನು ಎನ್ ಸಿಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ತೆಗೆದುಹಾಕುವ ಅಧಿಕಾರ ಅಜಿತ್ ಪವಾರ್ ನೇತೃತ್ವದ ಬಂಡಾಯ ಬಣಕ್ಕೆ ಇಲ್ಲ ಎಂದು ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷ ಜಯಂತ್ ಪಾಟೀಲ್ ಮಂಗಳವಾರ ಹೇಳಿದ್ದಾರೆ.

ಮುಂಬೈ: ನನ್ನನ್ನು ಎನ್ ಸಿಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ತೆಗೆದುಹಾಕುವ ಅಧಿಕಾರ ಅಜಿತ್ ಪವಾರ್ ನೇತೃತ್ವದ ಬಂಡಾಯ ಬಣಕ್ಕೆ ಇಲ್ಲ ಎಂದು ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷ ಜಯಂತ್ ಪಾಟೀಲ್ ಮಂಗಳವಾರ ಹೇಳಿದ್ದಾರೆ.
ಎನ್‌ಸಿಪಿಯ ಎಲ್ಲಾ ಶಾಸಕರು(ಒಟ್ಟು 53) ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ಇದ್ದಾರೆ ಎಂದು ಜಯಂತ್ ಪಾಟೀಲ್ ಅವರು ತಿಳಿಸಿದ್ದಾರೆ.
ನಿನ್ನೆ ಅಜಿತ್ ಪವಾರ್ ಬಣ, ಜಯಂತ್ ಪಾಟೀಲ್ ಅವರನ್ನು ವಜಾಗೊಳಿಸಿ, ಸುನೀಲ್ ತಟ್ಕರೆ ಅವರನ್ನು ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷರನ್ನಾಗಿ ನೇಮಿಸಿತ್ತು. ಅಲ್ಲದೆ ಜಯಂತ್ ಪಾಟೀಲ್ ಮತ್ತು ಜಿತೇಂದ್ರ ಅವ್ಹಾದ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ಮನವಿ ಮಾಡಿದೆ.
"ಅಜಿತ್ ಪವಾರ್ ನೇತೃತ್ವದ ಬಣ 'ಕಾಲ್ಪನಿಕ' ಪಕ್ಷವಾಗಿದೆ. ನನ್ನನ್ನು(ಎನ್‌ಸಿಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ) ತೆಗೆದುಹಾಕಲು ಅವರಿಗೆ ಯಾವುದೇ ಅಧಿಕಾರ ಇಲ್ಲ" ಎಂದು ಜಯಂತ್ ಪಾಟೀಲ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವರಾದ ಒಂಬತ್ತು ಶಾಸಕರ ವಿರುದ್ಧ ಕ್ರಮ ಕೈಗೊಂಡಿದ್ದೇನೆ. ಶರದ್ ಪವಾರ್ ನೇತೃತ್ವದ ಎನ್‌ಸಿಪಿಯು ಅಜಿತ್ ಪವಾರ್ ಮತ್ತು ಇತರ ಎಂಟು ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಮನವಿ ಸಲ್ಲಿಸಿದೆ ಎಂದು ಜಯಂತ್ ಪಾಟೀಲ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


