ದೇಶ

ಲೋಕಸಭೆ ಚುನಾವಣೆ ಹಿನ್ನೆಲೆ: ನಾಲ್ಕು ರಾಜ್ಯಗಳಿಗೆ ಬಿಜೆಪಿ ಅಧ್ಯಕ್ಷರ ನೇಮಕ

ರಾಜ್ಯಗಳ ವಿಧಾನಸಭೆ ಚುನಾವಣೆಗಳು ಮತ್ತು 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಸಂಘಟನಾತ್ಮಕವಾಗಿ ಪುನಶ್ಚೇತನಗೊಳಿಸಲು ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ತನ್ನ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ಮಂಗಳವಾರ ನೇಮಿಸಿದೆ.

ಲೋಕಸಭೆ ಚುನಾವಣೆ ಹಿನ್ನೆಲೆ: ನಾಲ್ಕು ರಾಜ್ಯಗಳಿಗೆ ಬಿಜೆಪಿ ಅಧ್ಯಕ್ಷರ ನೇಮಕ
ಬಿಜೆಪಿ ನೂತನ ರಾಜ್ಯಾಧ್ಯಕ್ಷರುಗಳ ನೇಮಕ
Published On :

ನವದೆಹಲಿ: ರಾಜ್ಯಗಳ ವಿಧಾನಸಭೆ ಚುನಾವಣೆಗಳು ಮತ್ತು 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪಕ್ಷವನ್ನು ಸಂಘಟನಾತ್ಮಕವಾಗಿ ಪುನಶ್ಚೇತನಗೊಳಿಸಲು ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ತನ್ನ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ಮಂಗಳವಾರ ನೇಮಿಸಿದೆ.

ಭಾರತೀಯ ಜನತಾ ಪಕ್ಷವು ನಾಲ್ಕು ರಾಜ್ಯ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಿದೆ. ವಿಧಾನಸಭೆ ಚುನಾವಣೆ ಎದುರಿಸಲಿರುವ ತೆಲಂಗಾಣದಲ್ಲಿಯೂ ರಾಜ್ಯಾಧ್ಯಕ್ಷರ ಬದಲಾವಣೆಯಾಗಿದೆ.

ತೆಲಂಗಾಣ ಬಿಜೆಪಿ ಅಧ್ಯಕ್ಷರಾಗಿ ಜಿ ಕಿಶನ್ ರೆಡ್ಡಿ, ಆಂಧ್ರಪ್ರದೇಶದ ರಾಜ್ಯಾಧ್ಯಕ್ಷರಾಗಿ ಡಿ ಪುರಂದೇಶ್ವರಿ, ಜಾರ್ಖಂಡ್‌ನ  ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಾಬುಲಾಲ್ ಮರಾಂಡಿ ಮತ್ತು ಪಂಜಾಬ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಸುನೀಲ್ ಜಾಖರ್ ಅವರನ್ನು ನೇಮಕ ಮಾಡಲಾಗಿದೆ.

ಕುತೂಹಲಕಾರಿಯಾಗಿ, ಜಾಖರ್ ಈ ಹಿಂದೆ ಪಂಜಾಬ್‌ನಲ್ಲಿ ಕಾಂಗ್ರೆಸ್‌ನ ರಾಜ್ಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ತೆಲಂಗಾಣದಲ್ಲಿ ಚುನಾವಣಾ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಈಟಾಲ ರಾಜೇಂದರ್ ಅವರನ್ನು ನೇಮಿಸುವುದಾಗಿ ಬಿಜೆಪಿ ಘೋಷಿಸಿತು.

ಈ ವರ್ಷದ ಕೊನೆಯಲ್ಲಿ ತೆಲಂಗಾಣದಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ ಸಂತೋಷ್ ಅವರ ನೇತೃತ್ವದಲ್ಲಿ ನಡೆದ ಸಭೆಗಳ ನಡುವೆ ಬಿಜೆಪಿಯಲ್ಲಿ ಸಂಘಟನಾ ಪುನರ್ರಚನೆಯ ಬಗ್ಗೆ ಚರ್ಚೆ ನಡೆದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.