ಪವಾರ್ v/s ಪವಾರ್: ನಾಳೆ ಎನ್‌ಸಿಪಿ ಸಭೆ ಕರೆದ ಇಬ್ಬರೂ ನಾಯಕರು!
ಮಹಾರಾಷ್ಟ್ರ ರಾಜಕೀಯ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಏಕನಾಥ್ ಶಿಂಧೆ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಎನ್ ಸಿಪಿ ಬಂಡಾಯ ನಾಯಕ ಅಜಿತ್ ಪವಾರ್ ಹಾಗೂ...

ಮುಂಬೈ: ಮಹಾರಾಷ್ಟ್ರ ರಾಜಕೀಯ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಏಕನಾಥ್ ಶಿಂಧೆ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಎನ್ ಸಿಪಿ ಬಂಡಾಯ ನಾಯಕ ಅಜಿತ್ ಪವಾರ್ ಹಾಗೂ ಎನ್ ಸಿಪಿ ವರಿಷ್ಠ ಶರದ್ ಪವಾರ್ ಇಬ್ಬರೂ ಬುಧವಾರ ಪಕ್ಷದ ನಾಯಕರ ಸಭೆ ಕರೆದಿದ್ದು, ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಅಜಿತ್ ಪವಾರ್ ಅವರು ನಾಳೆ ಎಲ್ಲಾ ಎನ್‌ಸಿಪಿ ಸಂಸದರು, ಎಂಎಲ್‌ಎಗಳು, ಎಂಎಲ್‌ಸಿಗಳು, ಜಿಲ್ಲಾ ಮುಖ್ಯಸ್ಥರು ಮತ್ತು ರಾಜ್ಯ ಪ್ರತಿನಿಧಿಗಳ ಸಭೆ ಕರೆದಿದ್ದಾರೆ.
ಜುಲೈ 5 ರಂದು ಎಂಇಟಿ ಬಾಂದ್ರಾದಲ್ಲಿ ಸಭೆಗೆ ಹಾಜರಾಗುವಂತೆ ಅಜಿತ್ ಪವಾರ್ ಅವರು ತಮ್ಮ ಬೆಂಬಲಿಗರಿಗೆ ಕೇಳಿಕೊಂಡಿದ್ದಾರೆ.
ಅದೇ ಸಮಯದಲ್ಲಿ, ಶರದ್ ಪವಾರ್ ಅವರು ಸಹ ವೈಬಿ ಚವಾಣ್ ಆಡಿಟೋರಿಯಂನಲ್ಲಿ ಎಲ್ಲಾ ಎನ್ ಸಿಪಿ ನಾಯಕರ ಸಭೆ ಕರೆದಿದ್ದಾರೆ. ಎನ್ ಸಿಪಿ ನಾಯಕರು ಯಾರ ಸಭೆಯಲ್ಲಿ ಭಾಗವಹಿಸಿದ್ದಾರೆ ಎಂಬುದು ತೀವ್ರ ಕುತೂಹಲಕ್ಕೆಕಾರಣವಾಗಿದೆ.
ಪಕ್ಷದ ವಿರುದ್ಧ ಬಂಡಾಯವೆದ್ದಿರುವ ಅಜಿತ್ ಪವಾರ್ ಅವರು ಭಾನುವಾರ ತಮ್ಮ ಬೆಂಬಲಿಗರೊಂದಿಗೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


