ಭೀಕರ ವಿಡಿಯೋ: ಮಾರ್ನಿಂಗ್ ವಾಕಿಂಗ್ ಮಾಡುತ್ತಿದ್ದವರಿಗೆ ಗುದ್ದಿದ ಕಾರು; ತಾಯಿ-ಮಗಳ ಸಾವು, ಕಾರು ಬಿಟ್ಟು ಚಾಲಕ ಪರಾರಿ
ತೆಲಂಗಾಣ ರಾಜಧಾನಿ ಹೈದರಾಬಾದ್ ನಲ್ಲಿ ಮಂಗಳವಾರ ಬೆಳಗ್ಗೆ ಭೀಕರ ಕಾರು ಅಪಘಾತ ಸಂಭವಿಸಿದ್ದು, ಮಾರ್ನಿಂಗ್ ವಾಕಿಂಗ್ ಮಾಡುತ್ತಿದವರಿದೆ ಕಾರು ಗುದ್ದಿದ ಪರಿಣಾಮ ತಾಯಿ-ಮಗಳು ಸಾವನ್ನಪ್ಪಿ ಮತ್ತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೈದರಾಬಾದ್: ತೆಲಂಗಾಣ ರಾಜಧಾನಿ ಹೈದರಾಬಾದ್ ನಲ್ಲಿ ಮಂಗಳವಾರ ಬೆಳಗ್ಗೆ ಭೀಕರ ಕಾರು ಅಪಘಾತ ಸಂಭವಿಸಿದ್ದು, ಮಾರ್ನಿಂಗ್ ವಾಕಿಂಗ್ ಮಾಡುತ್ತಿದವರಿದೆ ಕಾರು ಗುದ್ದಿದ ಪರಿಣಾಮ ತಾಯಿ-ಮಗಳು ಸಾವನ್ನಪ್ಪಿ ಮತ್ತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೈದರಾಬಾದ್ ನ ಬಂಡ್ಲಗುಡ ಸನ್ ಸಿಟಿಯಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ಮೂರು ಮಹಿಳೆಯರಿಗೆ ಕಾರು ಗುದ್ದಿದೆ. ಪರಿಣಾಮ ತಾಯಿ-ಮಗಳು ಸಾವನ್ನಪ್ಪಿದ್ದು, ಮತ್ತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಮಹಿಳೆಯರನ್ನು ಅನುರಾಧಾ ಮತ್ತು ಆಕೆಯ ಮಗಳು ಮಮತಾ ಎಂದು ಗುರುತಿಸಲಾಗಿದೆ. ಅವರ ಜೊತೆಯಲ್ಲಿದ್ದ ಇನ್ನೋರ್ವ ಮಹಿಳೆ ಕವಿತಾ ಮತ್ತು ಪುರುಷ ಇಂತಿಖಾಬ್ ಆಲಂ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ಪೊಲೀಸರ ಪ್ರಕಾರ, ಬೆಳಗಿನ ವಾಕಿಂಗ್ಗೆ ಹೊರಟಿದ್ದಾಗ ಬೆಳಿಗ್ಗೆ ಬಂಡ್ಲಗುಡ ರಸ್ತೆಯಲ್ಲಿ ಕಾರು ಅವರಿಗೆ ಡಿಕ್ಕಿ ಹೊಡೆದಿತ್ತು. ತಾಯಿ ಮತ್ತು ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು ನಾಲ್ವರು ಗಾಯಗೊಂಡಿದ್ದಾರೆ.
ಚಾಲಕ ಪರಾರಿ
ಅಪಘಾತದ ನಂತರ ಕಾರು ಚಾಲಕ ಕಾರು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತ ಮೂವರ ಮೃತದೇಹಗಳನ್ನು ಉಸ್ಮಾನಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು ಪ್ರಕರಣ ದಾಖಲಿಸಲಾಗಿದೆ.
ಅತಿವೇಗವೇ ಅಪಘಾತಕ್ಕೆ ಕಾರಣ
ಇನ್ನು ಪ್ರತ್ಯಕ್ಷದರ್ಶಿಗಳಾದ ಸ್ಥಳೀಯ ನಿವಾಸಿಗಳ ಪ್ರಕಾರ, ಕಾರು ಅತಿವೇಗವಾಗಿ ಚಲಿಸುತ್ತಿತ್ತು. ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿದೆ. ಈ ವೇಳೆ ಅದೇ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯರ ಗುಂಪಿಗೆ ಗುದ್ದಿದೆ. ಡಿಕ್ಕಿ ಹೊಡೆದ ನಂತರ ಕಾರು ರಸ್ತೆಯಿಂದ ಸ್ಕಿಡ್ ಆಗಿ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಹೇಳಿದ್ದಾರೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪೊಲೀಸರು ಕಾರು ಮಾಲೀಕರನ್ನು ಪತ್ತೆಹಚ್ಚಲು ಮತ್ತು ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


