ದೇಶ

ಭುವನೇಶ್ವರ: ಒಡಿಶಾ ಸರ್ಕಾರದ ಔಷಧಿ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ!

ಮಂಚೇಶ್ವರ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿರುವ ಒಡಿಶಾ ರಾಜ್ಯ ವೈದ್ಯಕೀಯ ನಿಗಮಗಳ (ಒಎಸ್‌ಎಂಸಿ) ಗೋಡೌನ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಔಷಧಗಳು ಮತ್ತು ವೈದ್ಯಕೀಯ ಉಪಕರಣಗಳು ಸುಟ್ಟುಭಸ್ಮವಾಗಿದೆ.

ಭುವನೇಶ್ವರ: ಒಡಿಶಾ ಸರ್ಕಾರದ ಔಷಧಿ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ!
ಸಾಂದರ್ಭಿಕ ಚಿತ್ರ
Published On :

ಭುವನೇಶ್ವರ: ಮಂಚೇಶ್ವರ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿರುವ ಒಡಿಶಾ ರಾಜ್ಯ ವೈದ್ಯಕೀಯ ನಿಗಮಗಳ (ಒಎಸ್‌ಎಂಸಿ) ಗೋಡೌನ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಔಷಧಗಳು ಮತ್ತು ವೈದ್ಯಕೀಯ ಉಪಕರಣಗಳು ಸುಟ್ಟುಭಸ್ಮವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಯಾವುದೇ ಗಾಯದ ವರದಿಯಾಗಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೀಗೆ ಹೇಳಿದೆ ಜುಲೈ 9, 2023 ರಂದು ತಡರಾತ್ರಿ ಮಂಚೇಶ್ವರದ ಮಾರ್ಕ್‌ಫೆಡ್ ಗೋಡೌನ್ ಸಂಖ್ಯೆ 3 ರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಈ ಗೋಡೌನ್‌ನಲ್ಲಿ PPE ಕಿಟ್‌ಗಳು, ಸ್ಯಾನಿಟೈಜರ್‌ಗಳು ಮತ್ತು ಖಾಲಿ ಸಿಲಿಂಡರ್‌ಗಳನ್ನು ಸಂಗ್ರಹಿಸಲಾಗಿತ್ತು.

ಪೊಲೀಸ್ ಮತ್ತು ಅಗ್ನಿಶಾಮಕ ಸೇವೆಗಳ ತುರ್ತು ಕ್ರಮದಿಂದ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಯಾವುದೇ ಗಾಯಗಳು ಅಥವಾ ಸಾವುನೋವುಗಳು ಸಂಭವಿಸಿಲ್ಲ." ಏಳು ಅಗ್ನಿಶಾಮಕ ವಾಹನಗಳು ಹಾಗೂ 50ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಗೋಡೌನ್‌ನಲ್ಲಿ ಸಂಗ್ರಹವಾಗಿದ್ದ ಖಾಲಿ ಗ್ಯಾಸ್ ಸಿಲಿಂಡರ್‌ಗಳಿಂದ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದು, ಇಂದು ಬೆಳಿಗ್ಗೆ ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.