ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ಅವಧಿಯನ್ನು ಜುಲೈ 24 ರವರೆಗೆ ಸುಪ್ರೀಂಕೋರ್ಟ್ ವಿಸ್ತರಿಸಿದೆ.

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ಅವಧಿಯನ್ನು ಜುಲೈ 24 ರವರೆಗೆ ಸುಪ್ರೀಂಕೋರ್ಟ್ ವಿಸ್ತರಿಸಿದೆ.
ವೈದ್ಯಕೀಯ ಕಾರಣಗಳಿಗಾಗಿ ಸತ್ಯೇಂದ್ರ ಜೈನ್ ಅವರಿಗೆ ಜಾಮೀನು ನೀಡಲಾಗಿತ್ತು. ನ್ಯಾ. ಎಎಸ್ ಬೋಪಣ್ಣ ಮತ್ತು ಎಂಎಂ ಸುಂದ್ರೇಶ್ ಅವರ ಪೀಠವು ಜೈನ್ ಪರ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರಿಗೆ ವೈದ್ಯಕೀಯ ವರದಿಗಳನ್ನು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರಿಗೆ ಸಲ್ಲಿಸುವಂತೆ ಸೂಚಿಸಿದೆ.
ಸಂಕ್ಷಿಪ್ತ ವಿಚಾರಣೆಯ ಸಂದರ್ಭದಲ್ಲಿ, ಸಿಂಘ್ವಿ ಮೂರು ಆಸ್ಪತ್ರೆಗಳು ಜೈನ್‌ಗೆ ಶಸ್ತ್ರಚಿಕಿತ್ಸೆಗೆ ಶಿಫಾರಸು ಮಾಡಿವೆ,
ವೈದ್ಯಕೀಯ ಕಾರಣಗಳಿಗಾಗಿ ಮೇ 26 ರಂದು ಜೈನ್ ಅವರಿಗೆ ಆರು ವಾರಗಳ ಮಧ್ಯಂತರ ಜಾಮೀನು ನೀಡಿದ್ದ ಸುಪ್ರೀಂಕೋರ್ಟ್, ತನ್ನ ಸ್ವಂತ ಖರ್ಚಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ತನ್ನ ಇಚ್ಛೆಯ ಚಿಕಿತ್ಸೆಯನ್ನು ಪಡೆಯುವ ಹಕ್ಕು ನಾಗರಿಕನಿಗೆ ಇದೆ ಎಂದು ಹೇಳಿದೆ.
ಕಳೆದ ವರ್ಷ ಮೇ 30 ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸತ್ಯೇಂದ್ರ ಜೈನ್ ಅವರನ್ನು ಬಂಧನಕ್ಕೊಳಪಡಿಸಿತ್ತು. ನಾಲ್ಕು ಕಂಪನಿಗಳ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಜೈನ್ ಅವರನ್ನು ಬಂಧಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


