ಫ್ರಾನ್ಸ್ನಿಂದ 26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ರಕ್ಷಣಾ ಸ್ವಾಧೀನ ಮಂಡಳಿ ಅನುಮೋದನೆ
ಭಾರತದ ನೌಕಾ ಪಡೆಗೆ 26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ರಕ್ಷಣಾ ಸ್ವಾಧೀನ ಮಂಡಳಿ ಗುರುವಾರ ಅನುಮೋದನೆ ನೀಡಿದೆ. ಫ್ರೆಂಚ್ ನ ಮೂಲ ತಯಾರಕರೊಂದಿಗೆ ಜಂಟಿಯಾಗಿ ಮೂರು ಹೊಸ ಜಲಾಂತರ್ಗಾಮಿ ನೌಕೆಗಳ ನಿರ್ಮಾಣವನ್ನು ಸಹ ಪ್ರಸ್ತಾವನೆ ಒಳಗೊಂಡಿದೆ ಎಂದು ಮೂಲಗಳು ಹೇಳುತ್ತವೆ.

ನವದೆಹಲಿ: ಭಾರತದ ನೌಕಾ ಪಡೆಗೆ 26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ರಕ್ಷಣಾ ಸ್ವಾಧೀನ ಮಂಡಳಿ ಗುರುವಾರ ಅನುಮೋದನೆ ನೀಡಿದೆ. ಫ್ರೆಂಚ್ ನ ಮೂಲ ತಯಾರಕರೊಂದಿಗೆ ಜಂಟಿಯಾಗಿ ಮೂರು ಹೊಸ ಜಲಾಂತರ್ಗಾಮಿ ನೌಕೆಗಳ ನಿರ್ಮಾಣವನ್ನು ಸಹ ಪ್ರಸ್ತಾವನೆ ಒಳಗೊಂಡಿದೆ ಎಂದು ಮೂಲಗಳು ಹೇಳುತ್ತವೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಕ್ಷಣಾ ಸ್ವಾಧೀನ ಮಂಡಳಿ ಸಭೆಯಲ್ಲಿ 26 ರಫೇಲ್-ಎಂ ಯುದ್ಧ ಯುದ್ಧವಿಮಾನಗಳ ಖರೀದಿ ಮತ್ತು ದೇಶದಲ್ಲಿ ಮೂರು ಹೊಸ ಜಲಾಂತರ್ಗಾಮಿ ನೌಕೆಗಳ ತಯಾರಿಕೆ ಸೇರಿದಂತೆ ಎರಡು ಪ್ರಸ್ತಾವನೆಗಳನ್ನು ಅನುಮೋದಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಕ್ರಮವು ದೇಶದ ನೌಕಪಡೆಯ ಸಾಮರ್ಥ್ಯವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಹೆಚ್ಚುವರಿ ಸ್ಕಾರ್ಪೀನ್ ಜಲಾಂತರ್ಗಾಮಿ ನೌಕೆಯ ನಿರ್ಮಾಣದಿಂದ ನೀರೊಳಗಿನ ಭಾರತೀಯ ನೌಕಾಪಡೆ ಯುದ್ಧ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಫ್ರಾನ್ಸ್ ಭೇಟಿಯ ಸಮಯದಲ್ಲಿ ಜುಲೈ 14-16 ರ ಅವಧಿಯಲ್ಲಿ ಫ್ರಾನ್ಸ್ನಿಂದ 26 ರಫೇಲ್ ಎಂ ಜೆಟ್ಗಳು ಮತ್ತು ಮೂರು ಹೆಚ್ಚುವರಿ ಸ್ಕಾರ್ಪೀನ್ ಜಲಾಂತರ್ಗಾಮಿ ನೌಕೆಗಳನ್ನು ಖರೀದಿಸುವ ಒಪ್ಪಂದವನ್ನು ಘೋಷಿಸುವ ನಿರೀಕ್ಷೆಯಿದೆ. ಈ ಒಪ್ಪಂದಗಳು ಸುಮಾರು 90,000 ಕೋಟಿ ರೂ. ಮೊತ್ತದ್ದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


